BBMP
Loading ...

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಎಡಬಿಡದೆ ಸುರಿಯುತ್ತಿರುವ ಮಳೆ: ಬೆಂಗಳೂರಿನಲ್ಲಿ ಅ.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Leave a Reply

Your email address will not be published. Required fields are marked *