BBMP
Loading ...

Lokayukta

Greater Bengaluru News9 : ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಮಾಡಿರೋದು ಪ್ರಕರಣದಲ್ಲಿ ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ ವಿ. ಮುನಿಯಪ್ಪ ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ.

ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ ವಿ. ಮುನಿಯಪ್ಪ ಅವರು 2014 ರಲ್ಲಿ ಬೆಂಗಳೂರು ಬಸವ ಭವನದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ವೇಳೆ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ನಿಬಂಧನೆಗಳ ಅಡಿಯಲ್ಲಿ ಲೋಕಾಯುಕ್ತರು ಭ್ರಷ್ಟಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಇಂದು ತೀರ್ಪು ಪ್ರಕಟಿಸಿರುವ ಕರ್ನಾಟಕ ಲೋಕಾಯುಕ್ತ ನ್ಯಾಯಾಲಯವು ಮುನಿಯಪ್ಪಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 4.5 ಕೋಟಿ ದಂಡ ವಿಧಿಸಿ ಆದೇಶಿಸಿದೆ. ಏತನ್ಮಧ್ಯೆ, 4.5 ಕೋಟಿ ದಂಡ ಕಟ್ಟದಿದ್ದರೆ 6 ತಿಂಗಳ ಹೆಚ್ಚುವರಿ ಶಿಕ್ಷೆಯನ್ನ ಕೋರ್ಟ್​ ವಿಧಿಸಿದೆ.

ಮುನಿಯಪ್ಪ ಮೇಲಿನ ಆರೋಪವೇನು?
2014 ರಲ್ಲಿ ಕರ್ನಾಟಕ ಲೋಕಾಯುಕ್ತರು ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಿದ್ದರು. ಈ ತನಿಖೆಯ ವೇಳೆ ಮುನಿಯಪ್ಪ ಅವರು ತಮ್ಮ ಆದಾಯಕ್ಕಿಂತಲೂ ₹3.31 ಕೋಟಿ ಅಧಿಕ ಆಸ್ತಿಯನ್ನು ಹೊಂದಿರುವುದು ಪತ್ತೆಯಾಗಿತ್ತು. ಅಂದರೆ, ಇದು ಅವರ ಕಾನೂನುಬದ್ಧ ಆದಾಯಕ್ಕಿಂತ ಸುಮಾರು 77.78% ರಷ್ಟು ಹೆಚ್ಚಾಗಿದೆ.

ಕರ್ನಾಟಕ ಲೋಕಾಯುಕ್ತವು ಸರ್ಕಾರದ ಅಧಿಕಾರಿಗಳು ಹಾಗೂ ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ತನಿಖೆ ಮಾಡುವ ಸ್ವತಂತ್ರ ಸಂಸ್ಥೆಯಾಗಿದ್ದು, ಜನರಿಗೆ ನ್ಯಾಯ ಒದಗಿಸುವ ಪ್ರಮುಖ ವ್ಯವಸ್ಥೆಯಾಗಿದೆ. ಇದು ಅಧಿಕಾರದ ದುರುಪಯೋಗ, ಲಂಚಕೋರಿಕೆ ಮತ್ತು ಅನ್ಯಾಯದ ವಿರುದ್ಧ ಹೋರಾಡಲು ಸ್ಥಾಪಿಸಲಾಗಿದೆ.

Leave a Reply

Your email address will not be published. Required fields are marked *