BBMP
Loading ...

bjp-flag

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ, ವಾಲ್ಮೀಕಿ ಹಗರಣ, ಕೋವಿಡ್‌ ಹಗರಣಗಳು ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಮತ್ತೊಂದು ಅಕ್ರಮ ಆರೋಪ ಕೇಳಿಬಂದಿದೆ. ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ನಿಯೋಗ ಲೋಕಾಯುಕ್ತಕ್ಕೆ ದೂರು ನೀಡಿದೆ.

ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳ ಹೆಲ್ತ್ ಚೆಕಪ್‌ನಲ್ಲಿ  ಭಾರೀ ಗೋಲ್ಮಾಲ್ ನಡೆದಿದೆ. 47.99 ಕೋಟಿ ರೂ.ಗಳನ್ನ ಗುಳುಂ ಮಾಡಲಾಗಿದೆ. ಯಾವುದೇ ಹೆಲ್ತ್ ಚೆಕಪ್ ನಡೆಸದೇ ಹಣ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ನಿಯೋಗ ಆರೋಪಿಸಿದೆ.

ಅಲ್ಲದೇ ಹೆಲ್ತ್ ಚೆಕಪ್ ಹೆಸರಲ್ಲಿ ಒಂದೊಂದಕ್ಕೆ ಒಂದೊಂದು ರೀತಿಯಲ್ಲಿ ಬಿಲ್ ಮಾಡಿದ್ದಾರೆ. ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ಕೊಟ್ಟು ಹಣ ಹೊಡೆದಿದ್ದಾರೆ. ಇದಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇರ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎ.ನ್‌ ರವಿಕುಮಾರ್ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ: ಸಚಿವ ಜಮೀರ್ ಅಹ್ಮದ್ ಘೋಷಣೆ.!

Leave a Reply

Your email address will not be published. Required fields are marked *