ಸ್ಮಾರ್ಟ್ ಸಿಟಿ ಮಾಡಲು ಹೊರಟಿರುವ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿ ಮೀತಿ ಮಿರುತ್ತಿರುತ್ತಿದೆ. ನಗರದಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ , ಕಟ್ಟಡಗಳ ಮೇಲ್ಬಾಗದಲ್ಲಿ,ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಹಾಕುವುದು ಯಥೇಚ್ಛವಾಗಿ ನಡೆಯುತ್ತಲೇ ಇದೆ. ಈ ಕುರಿತಾಗಿ 2017ರಿಂದ ಕಾಲ ಕಾಲಕ್ಕೆ ನ್ಯಾಯಾಲಯ ನಿರ್ದೇಶನಗಳನ್ನು ನೀಡುತ್ತಾ ಬಂದಿದೆ. ಆದರೆ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಬಿಬಿಎಂಪಿ ಹಾಗೂ ನಗರ ಪೊಲೀಸರು ನಿರ್ಲಕ್ಷ್ಯದ ಪರಮಾವಧಿ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಇದೇ ವರ್ಷ ಜನವರಿಯಲ್ಲಿ ಈ ಕುರಿತಾಗಿ ನ್ಯಾಯಾಲಯ ಆದೇಶವನ್ನು ಹೊರಡಿಸಿತ್ತು.ಆಗ ಬಿಬಿಎಂಪಿ (BBMP) 6.8 ಲಕ್ಷ ಅನಧಿಕೃತ ಬ್ಯಾನರ್, ಹೋರ್ಡಿಂಗ್ಗಳನ್ನು ತೆರವುಗೊಳಿಸಿತ್ತು ಆದರೆ ಕಳೆದ ಕೆಲ ದಿನಗಳಿಂದ ಮತ್ತೆ ಅಲ್ಲಲ್ಲಿ ಹೊಸ ಬ್ಯಾನರ್, ಕಟೌಟ್, ಫ್ಲೆಕ್ಸ್ ಗಳು ತಲೆ ಎತ್ತಿದ್ದು ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಚುರುಕು ಮುಟ್ಟಿಸಲು ಹೈಕೋರ್ಟ್ ಮುಂದಾಗಿದೆ.
ಈಗಾಗಲೇ ಪತ್ರಿಕೆಯಲ್ಲಿ ವರದಿಯಾಗಿರುವಂತೆ ನ್ಯಾಯಾಲಯದ ಹಲವು ಆದೇಶಗಳ ಹೊರತಾಗಿಯೂ ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳು, ಫ್ಲೆಕ್ಸ್ ಹಾಗೂ ಹೋರ್ಡಿಂಗ್ಗಳ ಹಾವಳಿ ಮುಂದುವರೆದಿರುವ ಕಾರಣ ಕಾಲ ಕಾಲಕ್ಕೆ ನ್ಯಾಯಾಲಯ ನೀಡಿರುವ ಆದೇಶಗಳನ್ನು ಪಾಲಿಸುವ ಹೊಣೆ ಹೊತ್ತಿರುವ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ವಿಫಲವಾಗಿರುವ ನಿಮ್ಮ ವಿರುದ್ಧ ನ್ಯಾಾಯಾಂಗ ನಿಂದನೆ ಅಡಿ ಕ್ರಮ ಏಕೆ ಜರುಗಿಸಬಾರದು? ಎಂಬ ಬಗ್ಗೆ ವಿವರಣೆ ಕೊಡುವಂತೆಯೂ ಹೈಕೋರ್ಟ್ ನಿರ್ದೇಶನ ನೀಡಿದೆ. ಜುಲೈ 26ರಂದು ಈ ಕುರಿತಾಗಿ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ.
ವೈದ್ಯರು ಇನ್ನು 6 ತಿಂಗಳು ಇದ್ರೆ ಹೆಚ್ಚು ಅಂದಿದ್ರು, ಛಲಗಾತಿ ಒಂದೂವರೆ ವರ್ಷ ಹೋರಾಡಿದಳು


