BBMP
Loading ...

ಬೆಂಗಳೂರು: 6 ರಿಂದ 14 ವರ್ಷದ ಮಕ್ಕಳು 8 ವರ್ಷದ ಶಿಕ್ಷಣ ಪಡೆಯುವುದು ಕಡ್ಡಾಯ. ಹೀಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಪಂಚಾಯತ್ ರಾಜ್ ಆಯುಕ್ತಾಲಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದೆ.

2024-25 ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮನೆ ಮನೆಗೆ ಭೇಟಿ ನೀಡಿ ಮೊಬೈಲ್​ ಮೂಲಕ ಸಮೀಕ್ಷೆ ಮಾಡಲಾಗುತ್ತಿದೆ. ಆ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಯೋಜನೆ ರೂಪಿಸಲಾಗಿದೆ.

ಗ್ರಾಮ ಪಂಚಾಯತ್​ಗಳು ಮನೆ ಮನೆ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆಗೆ ಸ್ವಸಾಹಯ ಸಂಘ ಹಾಗೂ ಮಹಿಳಾ ಸಂಘಗಳನ್ನ ಬಳಕೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿ 300 ಮನೆಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಹತೆ ಹೊಂದಿರುವ ಮತ್ತು ಸ್ಮಾರ್ಟ್ ಫೋನ್​ ಹೊಂದಿರುವ ಮಹಿಳೆಯರನ್ನ ಬಳಕೆ ಮಾಡಬಹುದಾಗಿದ್ದು, ಜುಲೈ 31ರೊಳಗೆ ಸಮೀಕ್ಷೆ ನಡೆಸಿ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಮನೆ ಮನೆ ಸಮೀಕ್ಷಾ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಇವರ ನೇತೃತ್ವದಲ್ಲಿ ಸಭೆಗಳನ್ನು ಆಯೋಜಿಸಿ, ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಬೇಕು. ಸಮೀಕ್ಷೆ ಸಮಯದಲ್ಲಿ ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳು, ಶಿಕ್ಷಣಾಧಿಕಾರಿಗಳು, ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳು, ಡಯಟ್‌ನ ಹಿರಿಯ ಉಪನ್ಯಾಸಕರು, ಉಪನ್ಯಾಸಕರು, ಬಿಆರ್​ ಸಿಸಿ, ವಿಷಯ ಪರಿವೀಕ್ಷಕರು, ಬಿಆರ್​ಪಿ, ಇಸಿಓಸಿಆರ್​ಪಿಗಳು ಮೇಲ್ವಿಚಾರಣೆ ನಡೆಸಿ, ಯಾವುದೇ ಮಗು ಮನೆ ಮನೆ ಸಮೀಕ್ಷೆಯಿಂದ ಹೊರಗುಳಿದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಮತ್ತು ಮನೆ-ಮನೆ ಸಮೀಕ್ಷೆ ನಡೆಯುವಾಗ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಲು ತಿಳಿಸಲಾಗಿದೆ.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗಣತಿದಾರರಿಗೆ ಗ್ರಾಮ ಪಂಚಾಯತಿಯಲ್ಲಿ ತರಬೇತಿ ನೀಡಬೇಕು. ಸದರಿ ತರಬೇತಿಯಲ್ಲಿ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ.

ವಿದ್ಯುತ್ ಕೆಲಸದ ವೇಳೆ ಲೈನ್​ಮ್ಯಾನ್​ಗಳು ತಪ್ಪದೇ ಈ ಅಗತ್ಯ ಮುನ್ನೆಚ್ಚರಿಕೆ ವಹಿಸಿ: ರಾಜ್ಯ ಸರ್ಕಾರದ ಸೂಚನೆ

Leave a Reply

Your email address will not be published. Required fields are marked *