ನವದೆಹಲಿ: ಒಂದು ಕೋಟಿ ಮನೆಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ಘೋಷಿಸಿದರು (Union Budget 2024). ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಈ ಸೌಲಭ್ಯ ನೀಡಲಾಗುತ್ತದೆ.
ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಸೋಲಾರ್ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಗೆ ಉತ್ತೇಜನ ನೀಡಲಾಗುವುದುʼʼ ಎಂದು ತಿಳಿಸಿದರು.
“ಪಿರ್‌ಪೈಂಟ್‌ನಲ್ಲಿ ಹೊಸ 2,400 ಮೆಗಾವ್ಯಾಟ್ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವುದು ಸೇರಿದಂತೆ 21,400 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಯೋಜನೆಗಳನ್ನು ವೆಚ್ಚದಲ್ಲಿ ಕೈಗೊಳ್ಳಲಾಗುವುದು” ಎಂದು ಹಣಕಾಸು ಸಚಿವರು ಘೋಷಿಸಿದರು.
2024-25ರ ಕೇಂದ್ರ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗೆ 3 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ಗಳನ್ನು ನಿರ್ಮಿಸಲಿದೆ ಎಂದು ಹೇಳಿದರು.
ಈ ಬಾರಿ ಬಜೆಟ್‌ನಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ ಅಧಿಕ ಒತ್ತು ನೀಡಿರುವ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ಬರೋಬ್ಬರಿ 20ಲಕ್ಷ ಯುವಕರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಘೋಷಿಸಿದೆ. ಹೊಸ ಉದ್ಯೋಗಿಗಳಿಗೆ ಒಂದು ತಿಂಗಳ ವೇತನವನ್ನು ಸರ್ಕಾರ ನೀಡಲಿದೆ. ಇದರಿಂದ ಬರೋಬ್ಬರಿ 2.1 ಲಕ್ಷ ಯುವಕರಿಗೆ ಬಹಳ ಅನಕೂಲಕರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಇನ್ನು ಉದ್ಯೋಗ ಸೃಷ್ಟಿ ಬಗ್ಗೆ ಕೇಂದ್ರ ಬಜೆಟ್‌ನಲ್ಲಿ ಭರ್ಜರಿ ಯೋಜನೆ ಘೋಷಿಸಲಾಗಿದೆ. ಉತ್ಪಾದನಾ ಕ್ಷೇತ್ರದಲ್ಲಿ ನಾಲ್ಕು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿರುವ ಕೇಂದ್ರ, ಮಾಲಿಕರು ಮತ್ತು ನೌಕರರಿಗೆ EPFO ಸೌಲಭ್ಯವನ್ನೂ ಘೋಷಿಸಿದೆ. ಮುದ್ರಾ ಯೋಜನೆ ಸಾಲದ ಪ್ರಮಾಣವನ್ನು 10ಲಕ್ಷ ರೂಗಳಿಂದ 20ಲಕ್ಷ ರೂ,ಗಳಿಗೆ ಹೆಚ್ಚಳ ಮಾಡಲಾಗಿದೆ. ವಿಶೇಷವಾಗಿ ಮಹಿಳಾ ಉದ್ಯೋಗಿಗಳನ್ನು ಕೇಂದ್ರೀಕರಿಸಿ ಕೌಶಾಲಾಭಿವೃದ್ಧಿ ತರಬೇತಿ ಮತ್ತು ಹಾಸ್ಟೆಲ್ ಸೌಲಭ್ಯ ಒದಗಿಸಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.
ಕೇಂದ್ರ ಬಜೆಟ್ 2024: ಜನ ಸಾಮಾನ್ಯರಿಗೆ ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಪೂರ್ಣ ಪಟ್ಟಿ…


