BBMP
Loading ...

Nanjavadhuta

ಬೆಂಗಳೂರು: ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿರುವ ನಂಜಾವಧೂತ ಮಹಾ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಗರದ ಯಲಹಂಕದ ರೈಲು ಗಾಲಿ ಕಾರ್ಖಾನೆ ಬಳಿಯಿರುವ ನಾಡಪ್ರಭು ಕೆಂಪೇಗೌಡರ ಸಂಘದಲ್ಲಿ ಇಂದು ಶ್ರೀ ಕೆಂಪೇಗೌಡರ 515ನೇ ಜಯಂತಿ ಅದ್ಧೂರಿಯಾಗಿ ನಡೆಯಿತು.

ಆಚರಣೆ ವೇಳೆ ಕೆಂಪೇಗೌಡರ ಪ್ರತಿಮೆಗೆ ಶ್ರೀಗಳು ಪುಷ್ಪಾರ್ಚನೆ ಮಾಡಿದರು. ಇದೇ ವೇಳೆ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ ಸಹ ನಡೆಯಿತು. ಅದ್ಧೂರಿಯಾಗಿ ನಡೆದ ಆಚರಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ಹೋಟೆಲ್, ಪಬ್, ಬಾರ್ ಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಬಿಬಿಎಂಪಿ!

Leave a Reply

Your email address will not be published. Required fields are marked *