ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇದೀಗ ವಿಪಕ್ಷಗಳು ನಿನ್ನೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಿಸಿವೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅವರು ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿದ್ದು ಇದೀಗ ಭಾರಿ ಸಂಚಲನ ಸೃಷ್ಟಿಸಿದೆ.
ಇಂದು ಬೆಂಗಳೂರಿನ ಗೃಹ ಕಛೇರಿ ಕೃಷ್ಣದಲ್ಲಿ ಸಚಿವ ಸಂಪುಟ ಪುನರಚನೆ ಮಾಡುತ್ತೀರಾ ಎಂಬ ಮಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಆವರು ಇಲ್ಲಾರಿ ಯಾವ ಸಚಿವ ಸಂಪುಟ ರಚನೆ ಇಲ್ಲ. ನಾನೆ ಚೀಫ್ ಮಿನಿಸ್ಟರ್ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ರಾಜ್ಯದ 12 ಕ್ರೀಡಾಪಟುಗಳಿಗೆ ಆಫರ್ ಲೆಟರ್ ನೀಡಿದ ಸಿಎಂ
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯನವರು ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಹಾಗೂ ಕಾಮನ್‍ವೆಲ್ತ್ ಗೇಮ್ಸ್ಗಳಲ್ಲಿ ಪದಕ ಗೆದ್ದಿದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ಆಫರ್ ಲೆಟರ್ ನೀಡಿದ್ದಾರೆ.
ಕ್ರೀಡಾಪಟುಗಳಿಗೆ ಆಫರ್ ಲೆಟರ್ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಪಡೆದವರಿಗೆ ರಾಜ್ಯ ಸರ್ಕಾರ ನೆರವಾಗಲಿದೆ. ಅದರಂತೆ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಲು ತೀರ್ಮಾನಿಸಿದ್ದೇವೆ. ಸುಮಾರು 12 ಜನರಿಗೆ ಅವಕಾಶ ಪತ್ರ ನೇರ ನೇಮಕಾತಿಗೆ ನೀಡುತ್ತಿದ್ದೇವೆ. 2016-17 ಒಲಂಪಿಕ್ಸ್ ಅಸೋಸಿಯೇಷನ್ ಏರ್ಪಾಡು ಮಾಡಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದೆ. ಆ ವೇಳೆ ರಾಜ್ಯದ ಕ್ರೀಡಾ ಸಾಧಕರಿಗೆ, ಪದಕ ಪಡೆದವರಿಗೆ ಸರ್ಕಾರದಲ್ಲಿ ಆದ್ಯತೆ ಮೇಲೆ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದೆ.
ಆದರೆ ನಂತರ ಬಂದ ಸರ್ಕಾರ ಅದನ್ನ ಜಾರಿ ಮಾಡುವ ಪ್ರಯತ್ನ ಮಾಡಲಿಲ್ಲ. ನಾನು ಮತ್ತೆ ಅಧಿಕಾರಕ್ಕೆ ಬಂದ್ಮೇಲೆ ಈಗ ಜಾರಿ ಮಾಡಿದ್ದೇನೆ. ಈ ಹಿಂದಿನ ಬೊಮ್ಮಾಯಿ ಸರ್ಕಾರ ಕ್ರೀಡಾ ಸಾಧಕರಿಗೆ ಪೊಲೀಸ್ ಇಲಾಖೆಯಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿತ್ತು. ನಾನು ಬಂದ್ಮೇಲೆ ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಮೀಸಲಾತಿ ಹೆಚ್ಚಿಸಿದ್ದೇನೆ. ಅಲ್ಲದೆ ಪದವಿ ಪಡೆದವರಿಗೆ ಗ್ರೂಪ್-ಸಿ ಉದ್ಯೋಗ ನೀಡಲು ತೀರ್ಮಾನ ಮಾಡಿದ್ದೇವೆ ಎಂದರು.
ಬೆಂಗಳೂರಿಗರೇ ಎಚ್ಚರ! ಬಿಬಿಎಂಪಿ ಅನುಮತಿ ಇಲ್ಲದೆ ಬ್ಯಾನರ್, ಫ್ಲೆಕ್ ಮುದ್ರಿಸಿದ್ರೆ 1 ವರ್ಷ ಜೈಲುಶಿಕ್ಷೆ ಫಿಕ್ಸ್!


