BBMP
Loading ...

ಬೆಂಗಳೂರು: ಇಂದು ಸ್ಪಟಿಕಪುರಿ ಸಂಸ್ಥಾನದ ಪರಮಪೂಜ್ಯ ಡ. ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿಯವರು ರಾಜ್ಯ ಒಕ್ಕಲಿಗರ ಸಂಘದ ಕಛೇರಿಗೆ ಭೇಟಿ ನೀಡಿ ಆಶೀರ್ವದಿಸಿದರು.

ಕಚೇರಿಗೆ ಭೇಟಿ ಕೊಟ್ಟ ಶ್ರೀಗಳು ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಇನ್ನಿತರ ಸದಸ್ಯರುಗಳು ಜತೆ ಉಭಯಕುಶಲೋಪರಿ ನಡೆಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಉಪಾಧ್ಯಕ್ಷರಾದ ಆರ್​. ಪ್ರಕಾಶ್​ ಅವರು ತಮ್ಮ ಫೇಸ್​ಬುಕ್​ ಪೇಜ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಕಳೆದ ಜುಲೈ ತಿಂಗಳಲ್ಲಿ ನಡೆದ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರವಣಬೆಳಗೊಳ ಶಾಸಕ ಸಿ.ಎನ್‌. ಬಾಲಕೃಷ್ಣ ಅವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಆರ್‌. ಪ್ರಕಾಶ್‌, ರಾಘವೇಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಸಿ. ದೇವರಾಜು, ಸಹಾಯಕ ಕಾರ್ಯದರ್ಶಿಯಾಗಿ ಆರ್. ಹನುಮಂತರಾಯಪ್ಪ, ಖಜಾಂಚಿಯಾಗಿ ಎಂ.ಎಸ್‌. ಉಮಾಪತಿ ಆಯ್ಕೆಯಾಗಿದ್ದಾರೆ.

2021ರ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದ ಸಿ.ಎನ್‌. ಬಾಲಕೃಷ್ಣ, 2022ರ ಜನವರಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕೋನಪ್ಪ ರೆಡ್ಡಿ ಉಪಾಧ್ಯಕ್ಷರಾಗಿದ್ದರು. ಈ ಸಮಿತಿಯ ವಿರುದ್ಧ ಕೆಂಚಪ್ಪ ಗೌಡ ಬಣವು ಅವಿಶ್ವಾಸ ಗೊತ್ತುವಳಿ ಮಂಡಿಸಿ 2023ರ ಜೂನ್‌ನಲ್ಲಿ ಪದಚ್ಯುತಗೊಳಿಸಲಾಗಿತ್ತು. ಬಂಡಾಯ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿದ್ದರು. ಅದೇ ವರ್ಷ ಜುಲೈಯಲ್ಲಿ ಮತ್ತೊಮ್ಮೆ ಚುನಾವಣೆ ನಡೆಸಿ ಕೆಂಚಪ್ಪ ಗೌಡ ಬಣದ ಡಿ. ಹನುಮಂತಯ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಒಂದು ವರ್ಷದ ಬಳಿಕ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸಿ.ಎನ್‌. ಬಾಲಕೃಷ್ಣ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಖಾಲಿ ನಿವೇಶನ ಮಾಲೀಕರೇ ದಂಡ ಕಟ್ಟಲು ಸಿದ್ಧರಾಗಿ! ಕಾರಣ ಇಲ್ಲಿದೆ ನೋಡಿ

Leave a Reply

Your email address will not be published. Required fields are marked *