BBMP
Loading ...

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈತ್ರಿ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಮುಗಿಸಿದವು. ಆದರೆ ಪಾದಯಾತ್ರೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಭಾಗವಹಿಸಿರಲಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿತ್ತು. ಇದೀಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷ ಟಿಕೆಟ್ ನೀಡದಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸಬಹುದಾಗಿ ಸಿಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

 

ಹೌದು ಹೈಕಮಾಂಡ್ ಬುಲಾವ್ ಹಿನ್ನೆಲೆ ಇಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಘೋಷಿಸಿದರು.

Leave a Reply

Your email address will not be published. Required fields are marked *