ಬೆಂಗಳೂರು: ನಾಳೆ (ಆ.19) ಬೆಳಿಗ್ಗೆ 10.30ಕ್ಕೆ ರಾಜ್ಯಪಾಲರ ಪಕ್ಷಪಾತಿ ಧೋರಣೆ, ಅಸಂವಿಧಾನಿಕ ನಡೆಯನ್ನು ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ನಮ್ಮೆಲ್ಲರ ಮೆಚ್ಚಿನ ಮಾಜಿ ಸಚಿವರು ವಿಜಯನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎಂ. ಕೃಷ್ಣಪ್ಪರವರು ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಪ್ರಿಯಕೃಷ್ಣರವರು ಭಾಗವಹಿಸಲಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಪಕ್ಷಪಾತಿ ಧೋರಣೆ, ಅಸಂವಿಧಾನಿಕ ನಡೆಯನ್ನು ಖಂಡಿಸಿ ನಾಳೆ ದಿನಾಂಕ 19-08-2024 ಬೆಳಿಗ್ಗೆ 11-00 ಗಂಟೆಗೆ ಸ್ವಾತಂತ್ಯ್ರ ಉದ್ಯಾನವನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ .ಪ್ರತಿಭಟನೆಯಲ್ಲಿ ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಡಿಸಿಸಿ ವ್ಯಾಪ್ತಿಯಲ್ಲಿ ಬರುವ ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ.
ಈ ಪ್ರತಿಭಟನೆಯಲ್ಲಿ ಮಾಜಿ ಬಿಬಿಎಂಪಿಯ ಸದಸ್ಯರುಗಳು, ಮಹಿಳಾ ಮುಖಂಡರು, ಡಿಸಿಸಿ/ಬಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್/ವಿಭಾಗಗಳ ಅಧ್ಯಕ್ಷರು/ಪದಾಧಿಕಾರಿಗಳು, ವಾರ್ಡ್ ಹಾಗೂ ಬೂತ್ ಮಟ್ಟದ ಕಾರ್ಯಕರ್ತರುಗಳು ಹಾಗೂ ಇತರ ಎಲ್ಲ ಸ್ಥಳೀಯ ಮುಖಂಡರುಗಳು ಮತ್ತು ನೀವುಗಳೆಲ್ಲಾರು ಸಕ್ರಿಯವಾಗಿ ಪಾಲ್ಗೊಂಡು ಪ್ರತಿಭಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.
ಗೋವಿಂದರಾಜನಗರದಲ್ಲಿ ಮರ ಬಿದ್ದು ಆಟೋ ಚಾಲಕ ಸಾವು: ಶಾಸಕ ಪ್ರಿಯಕೃಷ್ಣ ಸಂತಾಪ, ವೈಯಕ್ತಿಕ ನೆರವಿನ ಭರವಸೆ


