ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಲ್ಲಲಿದೆ. ಈಗಾಗಲೇ ಹೈಕಮಾಂಡ್ ನಾಯಕರು ಬೆಂಬಲ ನಿಲ್ಲುವುದಾಗಿ ತಿಳಿಸಿದ್ದಾರೆ ಎಂದರು.
ಸಿದ್ದರಾಮಯ್ಯ ರಾಜ್ಯದಲ್ಲಿನ ಬೆಳವಣಿಗೆ ಕುರಿತು ಹೈಕಮಾಂಡ್ ಮಾಹಿತಿ ನೀಡಲಿದ್ದಾರೆ. ಅದನ್ನು ಹೊರತುಪಡಿಸಿದ್ರೆ ವಿಶೇಷವೇನು ಇಲ್ಲ ಎಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಿರುವ 392 ಸರ್ಕಾರಿ ನೌಕರರು ಪತ್ತೆ: ದಂಡ ವಸೂಲಿಗೆ ಸಿದ್ಧತೆ!


