BBMP
Loading ...

ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು ಇನ್ಮುಂದೆ ಹಣದ ಬದಲಾಗಿ ಸಿಗಲಿದೆ ಉಚಿತವಾಗಿ 10 ಕೆಜಿ ಅಕ್ಕಿ ನೀಡಲಾಗುತ್ತದೆ. ಬಿಪಿಎಲ್‌ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಕಿ ಪೂರೈಸುವ ಬಗ್ಗೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈಗಾಗಲೇ ಘೋಷಣೆ ಮಾಡಿದೆ. ಹಾಗಾಗಿ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಸಿಗಲಿದೆ.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ.

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕ ಮಹೇಶ್ವರಪ್ಪ ಬಿಒ ಬುಧವಾರ ತಿಳಿಸಿದ್ದಾರೆ.

ವಿಜಯನಗರದಲ್ಲಿ ದೆಹಲಿ ಮಾದರಿ ಪಾಲಿಕೆ ಅಂಡರ್​ಗ್ರೌಂಡ್ ಬಜಾರ್: ಶಾಸಕ ಕೃಷ್ಣಪ್ಪರ ಕನಸು ನನಸು

Leave a Reply

Your email address will not be published. Required fields are marked *