BBMP
Loading ...

ಬೆಂಗಳೂರು: ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಅವರು ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೆಟ್ರೊ ನಿಲ್ದಾಣದ ಬಳಿ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಹವಾನಿಯಂತ್ರಿತ ಮಾರುಕಟ್ಟೆ ಕೃಷ್ಣದೇವರಾಯ ಪಾಲಿಕೆ ಬಜಾರ್ ನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಜನಪರ ಚಿಂತನೆಯ ಯೋಜನೆ
ಬೀದಿವ್ಯಾಪಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸಲಾಗಿದ್ದು, ಇಲ್ಲಿ 79 ಮಳಿಗೆಗಳಿವೆ. ದಕ್ಷಿಣ ಭಾರತದಲ್ಲಿಯೇ ಇಂತಹ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿತವಾಗಿರುವುದು ಇದೇ ಮೊದಲು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಅವರಿಗೆ ಗೌರವ ಸೂಚಿಸುವಂತೆ ಬಜಾರ್ ನ್ನು ಕೃಷ್ಣದೇವರಾಯ ಪಾಲಿಕೆ ಎಂದು ನಾಮಕರಣ ಮಾಡಿರುವುದು ಶ್ಲಾಘನೀಯ ಎಂದರು. ಪಾಲಿಕೆ ಬಜಾರ್ ಸರ್ಕಾರದ ಜನಪರ ಚಿಂತನೆಯ ಯೋಜನೆ. ಇದು ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇಂತಹ ಬಜಾರ್ ಗಳು ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ವಿಶೇಷವಾಗಿ ಗಾಂಧಿಬಜಾರ್ ನಂತಹ ಜನನಿಬಿಡ ಪ್ರದೇಶಗಳಲ್ಲಿ ನಿರ್ಮಿಸುವ ಅಗತ್ಯವಿದೆ ಎಂದರು.

ವಿಜಯನಗರ ನನಗೆ ಚಿರಪರಿಚಿತ
ತಾನು ಈ ಹಿಂದೆಯೂ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ನೆನಪನ್ನು ಮೆಲಕು ಹಾಕಿದ ಮುಖ್ಯಮಂತ್ರಿಗಳು , ಈ ಪ್ರದೇಶ ನನಗೆ ಬಹಳ ಚಿರಪರಿಚಿತವಾಗಿದೆ ಎಂದರು. ವ್ಯಾಪಾರಿಗಳ ಪರಿಸ್ಥಿತಿಯನ್ನು ಆಗನಿಂದಲೇ ಗಮನಿಸಿದ್ದ ನನಗೆ, ಶಾಸಕ ಕೃಷ್ಣಪ್ಪನವರ ಬೇಡಿಕೆ ಸಮಂಜಸವಾಗಿದೆ ಎನ್ನಿಸಿತ್ತು ಎಂದು ತಿಳಿಸಿದರು.

ಎಂ.ಕೃಷ್ಣಪ್ಪ ಅವರ ಕನಸಿನ ಯೋಜನೆ
ವಿಜಯನಗರ ವಿಧಾನಸಭಾಕ್ಷೇತ್ರದಲ್ಲಿ ಕೃಷ್ಣದೇವರಾಯ ಪಾಲಿಕೆ ಬಜಾರ್ ಯೋಜನೆ ಇಲ್ಲಿನ ಶಾಸಕರಾದ ಎಂ.ಕೃಷ್ಣಪ್ಪ ಅವರ ಕನಸು. ಇಲ್ಲಿನ ಬೀದಿವ್ಯಾಪಾರಿಗಳು ಬಿಸಿಲು ಗಾಳಿ ಮಳೆಯಲ್ಲಿ ವ್ಯಾಪಾರ ಮಾಡಬೇಕಾಗಿದ್ದು, ಅವರಿಗೆ ವ್ಯಾಪಾರ ಮಾಡಲು ಸ್ಥಳಾವಕಾಶ ಮಾಡಿಕೊಡಲು ಬೇಡಿಕೆಯಿರಿಸಿದ್ದರು. ನಾನು 2017 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ , ಪಾಲಿಕೆ ಬಜಾರ್ ಗಳ ನಿರ್ಮಾಣಕ್ಕೆ 5 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಿದ್ದು, ಇಂದು ನಾನೇ ಈ ಬಜಾರ್ ನ್ನು ಉದ್ಘಾಟಿಸುತ್ತಿರುವುದು ಸಂತೋಷ ತಂದಿದೆ ಎಂದರು.

ಬೆಂಗಳೂರು ನಗರ ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಬಸ್ ನಿಲ್ದಾಣ ಹಾಗೂ ಮೆಟ್ರೋ ರೈಲು ನಿಲ್ದಾಣವಿರುವ ಸೂಕ್ತ ಸ್ಥಳದಲ್ಲಿ ಪಾಲಿಕೆ ಬಜಾರ್ ನಿರ್ಮಾಣವಾಗಿದೆ. ಇದರಿಂದ ಬಹಳ ಜನರಿಗೆ ಅನುಕೂಲವಾಗಲಿದೆ. ಒಂದೇ ಕಡೆ ಎಲ್ಲಾ ವ್ಯಾಪಾರ ಮಾಡುವವರಿಗೆ ವ್ಯವಸ್ಥೆ ಕಲ್ಪಿಸಿದ್ದು, ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.

ಪಾಲಿಕೆಯಿಂದ ಬೀದಿಬದಿ ವ್ಯಾಪಾರಿಗಳಿಗೆ ನೀಡಲಾಗಿರುವ ಕಾರ್ಡ್‌ಗಳೂ ಇರುವುದರಿಂದ ತುಂಬಾ ಕಡಿಮೆ ವೆಚ್ಚದಲ್ಲಿ ಮಳಿಗೆಗಳನ್ನಿಟ್ಟುಕೊಂಡು ವ್ಯಾಪಾರ ಮಾಡಬಹುದಾಗಿದೆ. ಇಲ್ಲಿ ವ್ಯಾಪಾರಿಗಳಿಗೆ ಕಡಿಮೆ ವೆಚ್ಚದಲ್ಲಿ ವ್ಯಾಪಾರ ಮಾಡಲು ಅನುವು ಮಾಡಿಕೊಡಲಾಗುತ್ತಿದ್ದು, ಇಲ್ಲಿ ಎಸಿ, ಶೌಚಾಲಯ ಹಾಗೂ ಇತರೆ ಅನಿವಾರ್ಯ ಸೌಕರ್ಯಗಳನ್ನು ಮಾಡಿಕೊಡಲಾಗುತ್ತಿದೆ. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಮಳಿಗೆಗಳನ್ನು ಇಡುವುದರಿಂದ ಜನರಿಗೆ ಸಂಚರಿಸಲೂ ಅನಾನುಕೂಲವಾಗುವುದರಿಂದ ಈ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ಅಂಡರ್ ಗೌಂಡ್ ಪಾಲಿಕೆ ಬಜಾರ್ ಸಹಕಾರಿಯಾಗಲಿದೆ. ನಗರೋತ್ಥಾನ ಯೋಜನೆಯಲ್ಲಿ ನಿರ್ಮಿಸಲಾದ ಈ ಮಾರುಕಟ್ಟೆಯಲ್ಲಿ 79 ಕ್ಕೂ ಹೆಚ್ಚು ಮಳಿಗೆಗಳು ಇರಲಿದೆ. ಜತೆಗೆ ಎರಡು ಎಸ್ಕಲೇಟರ್, ಒಂದು ಲಿಫ್ಟ್ ಇರಲಿದ್ದು, 7-8 ಪ್ರದೇಶ ಹಾಗೂ ನಿರ್ಗಮನ ಪಾಯಿಂಟ್‌ಗಳಿರಲಿವೆ. 7-8 ಸೈಲೈಟ್‌ಗಳೂ ಇರಲಿದೆ.

ಈ ಹೊಸ ಮಾರುಕಟ್ಟೆ ನಿರ್ಮಾಣವಾಗಿರುವ ಪ್ರದೇಶದಲ್ಲಿ ಈ ಹಿಂದೆ 150 ಕ್ಕೂ ಹೆಚ್ಚು ಮಾರಾಟಗಾರರು ತರಕಾರಿಗಳು, ಹೂವುಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸುವ ವ್ಯಾಪಾರ -ವಹಿವಾಟು ನಡೆಯುತ್ತಿದ್ದವು. ಹೊಸ ಅಂಡರ್ ಗೌಂಡ್ ಮಾರುಕಟ್ಟೆಗೆ ಸ್ಥಳಾವಕಾಶ ಕಲ್ಪಿಸಲು ಹಳೆಯ ಸರ್ವೀಸ್ ರಸ್ತೆಯನ್ನು ಪರಿವರ್ತಿಸಲಾಗಿದೆ. ಮೆಟ್ರೋ ನಿಲ್ದಾಣದ ಬಳಿ ಸಬ್‌ವೇ ಪಕ್ಕದಲ್ಲಿ ಈ ಅಂಡರ್ ಗೌಂಡ್ ಪಾಲಿಕೆ ಬಜಾರ್ ಇರಲಿದ್ದು, ಮೆಟ್ರೋದ ನಿರ್ಗಮನಕ್ಕೂ ಬಜಾರ್‌ ಆಗಮನಕ್ಕೂ 10 ಮೀ. ಅಂತರವಿರಲಿದೆ.

ಏನೆಲ್ಲ ವ್ಯವಸ್ಥೆ..?
* ಒಂದು ಎಲೆಕ್ಟ್ರಿಕ್​ ಕೋಣೆ
* ಒಂದು ಸ್ಟೋರ್ ಆಫೀಸ್
* 26 ಒಳಾಂಗಣ ಎಸಿ ಯೂನಿಟ್​
• ಐದು ಹೊರಾಂಗಣ ಯುನಿಟ್
* ಎಂಟು ಆಗಮನ-ನಿರ್ಗಮನ ಪಾಯಿಂಟ್​
* ಎರಡು ಎಸ್ಕಲೇಟರ್
* ಒಂದು ಗೂಡ್ಸ್ ಅಥವಾ ವ್ಯಕ್ತಿಗಳ ಲಿಫ್ಟ್

ದುಡ್ಡು ಒಂದಿದ್ರೆ ಏನು ಬೇಕಾದ್ರು ಮಾಡ್ಬಹುದು ಅನ್ನೋದಕ್ಕೆ ಇದೇ ಸಾಕ್ಷಿ! ಜೈಲಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ, ತನಿಖೆಗೆ ಅದೇಶ

Leave a Reply

Your email address will not be published. Required fields are marked *