BBMP
Loading ...

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ವಿಚಾರದ ಕುರಿತಂತೆ ಇದೀಗ ರೇಣುಕಾಸ್ವಾಮಿ ಹತ್ಯೆ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿ ರೇಣುಕಾಸ್ವಾಮಿ ಹತ್ಯೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಜೈಲಿನ ಹಿರಿಯ ಅಧಿಕಾರಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ. ಜೈಲು ಡಿಜಿಪಿ ಆದೇಶದ ಬಳಿಕ ರೇಣುಕಾಸ್ವಾಮಿ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗಿದೆ.

ವಿಲ್ಸನ್ ಗಾರ್ಡನ್ ನಾಗ ಹಾಗೂ ನಟ ದರ್ಶನ್, ರೇಣುಕಾಸ್ವಾಮಿ ಹತ್ಯೆ ಆರೋಪಿಗನ್ನು ಬಳ್ಳಾರಿ, ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು ಈಗಾಗಲೇ ಜೈಲಿನ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತಂತೆ ಈಗಾಗಲೇ ಜೈಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಕೋರ್ಟ್ ಅನುಮತಿಗಾಗಿ ಕಾಯುತ್ತಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಡಿ ಗ್ಯಾಂಗ್ ಬಳ್ಳಾರಿಯ ಜೈಲಿಗೆ ಶಿಫ್ಟ್ ಆಗಲಿದೆ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 35 ಡಿವೈಎಸ್​ಪಿ, 88 ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಇಲ್ಲಿದೆ ಲೀಸ್ಟ್​

Leave a Reply

Your email address will not be published. Required fields are marked *