BBMP
Loading ...

BBMP

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರೋಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆನ್ಸಿ ( ಪಿಎಂಸಿ) ಕಾರ್ಯವನ್ನು ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳೇ ಕಾನೂನು ಬಾಹಿರವಾಗಿ ನಿರ್ವಹಿಸುತ್ತಿದ್ದಾರೆ ಎಂದು ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಹಾಗೂ ಆಡಳಿತಾಧಿಕಾರಿ ಉಮಾಶಂಕರ್ ಅವರಿಗೆ ದೂರು ನೀಡಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಒಟ್ಟು ಮೊತ್ತದ ಶೇ. 02% ರಷ್ಟು ಮೊತ್ತವನ್ನು ಪಿಎಂಸಿ ಹೆಸರಿನಲ್ಲಿ ಕಡಿತಗೊಳಿಸುವ ಮುಖ್ಯ ಅಭಿಯಂತರರುಗಳು ಅಂತಹ ಎಲ್ಲಾ ಕಾರ್ಯಗಳನ್ನು ತಮ ಸಂಬಂಧಿಕರು, ಬೆಂಬಲಿಗರು ಇಲ್ಲವೇ ಹಿಂಬಾಲಕರ ಮೂಲಕವೇ ನಡೆಸುತ್ತಾ, ಪ್ರತಿಯೊಂದು ಕಾಮಗಾರಿಯಲ್ಲಿ ಲಕ್ಷಾಂತರ ರೂಪಾಯಿಗಳನ್ನು ಕೊಳ್ಳೆ ಹೊಡೆಯುತ್ತಿರುವುದು ನಿಮ ಗಮನಕ್ಕೆ ಬಂದಿಲ್ಲವೇ ಎಂದು ಅವರು ಆಯುಕ್ತರು ಹಾಗೂ ಆಡಳಿತಾಧಿಕಾರಿ ಉಮಾಶಂಕರ್ ಅವರನ್ನು ಪ್ರಶ್ನಿಸಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಪಿಎಂಸಿ ಏಜೆನ್ಸಿಗಳನ್ನು ನಿಗದಿ ಮಾಡುವ ಸಂಬಂಧ ನಿಯಮಾನುಸಾರ ಟೆಂಡರ್ ಹಾಗೂ ಕೊಟೇಷನ್ಗಳ ಮೂಲಕ ಅರ್ಹ ಸಂಸ್ಥೆಗಳಷ್ಟೇ ಪಿಎಂಸಿ ಕಾರ್ಯಾದೇಶ ಪತ್ರಗಳನ್ನು ನೀಡಬೇಕಿರುತ್ತದೆ. ಪಿಎಂಸಿ ಮೊತ್ತ ಐದು ಲಕ್ಷಕ್ಕಿಂತ ಹೆಚ್ಚಿದ್ದರೆ ಟೆಂಡರ್ ಆಹ್ವಾನಿಸಿದ ನಂತರ ಅರ್ಹರಿಗೆ ಪಿಎಂಸಿ ಕಾರ್ಯದ ಕಾರ್ಯಾದೇಶ ಪತ್ರ ನೀಡಬೇಕಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿಗಳ ಕುರಿತ ಕುಂದುಕೊರತೆಗಳನ್ನು ಆಲಿಸಲು ದೂರವಾಣಿ ಸಂಖ್ಯೆ ಬಿಡುಗಡೆ

ಬೆಂಗಳೂರಲ್ಲಿ ಬೀದಿ ನಾಯಿಗಳ ಹಾವಳಿಗೆ ನಿವೃತ್ತ ಶಿಕ್ಷಕಿ ಬಲಿ; ಬಿಬಿಎಂಪಿ ನಿರ್ಲಕ್ಷಕ್ಕೆ ಸಾರ್ವಜನಿಕರ ಆಕ್ರೋಶ

Leave a Reply

Your email address will not be published. Required fields are marked *