ಬೆಂಗಳೂರು: ಪ್ರೆಸ್ಕ್ಲಬ್ ಕೌನ್ಸಿಲ್ ಆಯೋಜಿಸಿದ್ದ 2024ನೇ ಪ್ರೆಸ್ ಕ್ಲಬ್ ಕೌನ್ಸಿಲ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ತುರುವೇಕೆರೆ ಇನ್ಸ್ಪೆಕ್ಟರ್ ಲೋಹಿತ್ ಅವರಿಗೆ 24ನೇ ಪ್ರೆಸ್ ಕ್ಲಬ್ ಕೌನ್ಸಿಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ಕರವೇ ಕನ್ನಡಿಗರ ಧ್ವನಿ ರಾಜ್ಯಾಧ್ಯಕ್ಷರಾದ ಅನಿಲ್ ಕುಮಾರ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದರು.
ಶ್ರೀ ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ದಕ್ಷಿಣಾಮ್ನಾಯ ಶ್ರೀಶಾರದಾಪೀಠ, ಶೃಂಗೇರಿ ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ನಿನ್ನೆ (ಆ.31) ಪ್ರೆಸ್ ಕ್ಲಬ್ ಕೌನ್ಸಿಲ್ ಅವಾರ್ಡ್-2024 ಪ್ರಶಸ್ತಿ ಪ್ರದಾನ ಸಮಾರಂಭ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಿತು.
ಬೆಂಗಳೂರಿನ ಶ್ರೀ ಶಿರಡಿ ಸಾಯಿ ಭಿಕ್ಷಾ ಕೇಂದ್ರದ ಸಂಸ್ಥಾಪಕರು ಮತ್ತು ಛೇರ್ಮನ್ ಲಕ್ಷ್ಮೀ ಶ್ರೀನಿವಾಸ ಗುರೂಜಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರೆಸ್ ಕ್ಲಬ್ ಕೌನ್ಸಿಲ್ನ ಗೌರವ ಅಧ್ಯಕ್ಷರು, ಲೇಖಕ ಹಾಗೂ ಚಿಂತಕ ಶ್ರೀಯುತ ಮಣ್ಣೆ ಮೋಹನ್, ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀಯುತ ರಾಘವೇಂದ್ರಚಾರ್. ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಳೆದ ವರ್ಷ ಇದೇ ಪ್ರಶಸ್ತಿಗೆ ಕರವೇ ಕನ್ನಡಿಗರ ಧ್ವನಿ ರಾಜ್ಯಾಧ್ಯಕ್ಷ ಅನಿಲ್ ಕುಮಾರ್ ಅವರು ಭಾಜನಾಗಿದ್ದರು.

ಕಳೆದ ವರ್ಷದ ಪ್ರಶಸ್ತಿ ಪುರಷ್ಕೃತರು



