BBMP
Loading ...

BSY

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರೆ ಅನುಮಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಒಳಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಅಲ್ಲದೇ ತಪ್ಪು ಮಾಡಿದ್ದರೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಖಡಕ್ ಆಗಿ ಹೇಳಿದ್ದಾರೆ.

ಇದರ ಮಧ್ಯ ದೂರುದಾರೆ ಸಂತ್ರಸ್ತೆ ತಾಯಿ ಸಾವಿನ ಬಗ್ಗೆ ಅನುಮಾನಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಆರೋಪ ಮಾಡಿದ್ದ ಮಹಿಳೆಯ ಸಾವಿನ ಪ್ರಕರಣದ ಕುರಿತು ಪೊಲೀಸ್ ತನಿಖೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ. ಅಲ್ಲದೆ, ಮಹಿಳೆಯ ಅನುಮಾನಾಸ್ಪದ ಸಾವು ಹಾಗೂ ಅಂತ್ಯಸಂಸ್ಕಾರದ ಕುರಿತು ವರದಿ ಸಲ್ಲಿಸುವಂತೆ ಬೆಂಗಳೂರು ಪೊಲೀಸರಿಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಆಯೋಗ ಪತ್ರದ ಮೂಲಕ ಖಡಕ್‌ ಆಗಿ ತಿಳಿಸಿದ್ದಾರೆ.

ಬಾಕಿ ದುಡ್ಡು ಕೊಟ್ಟರಷ್ಟೇ ರಸ್ತೆ ಗುಂಡಿ ಮುಚ್ತೀವಿ ಎಂದ ಗುತ್ತಿಗೆದಾರರು!

Leave a Reply

Your email address will not be published. Required fields are marked *