BBMP
Loading ...

Lok adalat

ಬೆಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 14 ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಅದರಂತೆ ಪಿರ್ಯಾದಿದಾರರು ಮತ್ತು ಆರೋಪಿತರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ನಡುವಿನ ಸಿವಿಲ್ ಪ್ರಕರಣಗಳು, ರಾಜಿ ಆಗಬಹುದಾದ ಅಪರಾಧಿಕ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.

ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

Leave a Reply

Your email address will not be published. Required fields are marked *