ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ ನಡೆಸಿದ್ದು ನಿನ್ನೆ ದಾಳಿ ಮಾಡಿ ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಸೀಜ್ ನಾಗ ಸೇರಿ ಸಹಚರರ ಸುಮಾರು 18 ಮೊಬೈಲ್ಫೋನ್ ಸೀಜ್ ಮೊಬೈಲ್ ಜೊತೆ ಡ್ರಗ್ಸ್ ಹಾಗೂ ಹಣ ವಶಕ್ಕೆ ಪಡೆದಿರುವ ಸಿಸಿಬಿ
ಕೇಂದ್ರ ಕಾರಾಗೃಹದಲ್ಲಿಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್ ಜೊತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಕೂಡ ಇದ್ದನು. ಇದೀಗ, ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
ಆಗಸ್ಟ್ 24 ರಂದು ಸಿಸಿಬಿ ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್ ಮತ್ತು ಎಡಗೈನಲ್ಲಿ ಸಿಗರೇಟ್ ಹಿಡಿದಿರುವ ಫೋಟೋ ವೈರಲ್ ಆಗಿತ್ತು. ಇದು ಹಲವು ಅನುಮಾನಕ್ಕೆ ಕಾರಣವಾಗಿತ್ತು.
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಸೂಚನೆ ನೀಡಿದ್ದರು. ತನಿಖೆ ನಡೆಸಿ ವರದಿ ನೀಡಲು ಸಿಸಿಬಿ ಹೆಚ್ಚುವರಿ ಆಯುಕ್ತ ಡಾ.ಚಂದ್ರಗುಪ್ತಗೆ ಸೂಚಿಸಿದ್ದರು.
ಬಿಬಿಎಂಪಿ ಚುನಾವಣೆ ವಿಳಂಬ: ಕೌನ್ಸಿಲರ್ಗಳು ಇಲ್ಲದೇ 4 ವರ್ಷ, ಅಧಿಕಾರಿಗಳ ಆಡಳಿತದಲ್ಲಿ ಅಭಿವೃದ್ಧಿಗೆ ಹಿನ್ನೆಡೆ


