BBMP
Loading ...

images

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ. ಒಂದು ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅವರನ್ನು ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದರು. ಇದೀಗ ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋ್ ಗಜಾನನ ಭಟ್ ಶಾಸಕ ಮುನಿರತ್ನಗೆ 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಕೋರ್ಟ್ ಆದೇಶದ ಬಳಿಕ ಶಾಸಕ ಮುನಿರತ್ನರನ್ನು ಅಶೋಕ್ ನಗರ ಪೊಲೀಸರು ತಡರಾತ್ರಿ 12 ಗಂಟೆಯಿಂದ 1.30 ರವರೆಗೆ ವಿಚಾರಣೆ ನಡೆಸಿದ್ದಾರೆ. ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಗುತ್ತಿಗೆದಾರ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದರು.

ಅಕ್ರಮ ತಡೆಗೆ ಮಹತ್ವದ ಕ್ರಮ : ಬಿಡಿಎ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ!

Leave a Reply

Your email address will not be published. Required fields are marked *