ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಚಾರಣೆಯನ್ನು ನಾಳೆಗೆ (ಬುಧವಾರ) ಮುಂದೂಡಿದೆ.
ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಎಂಬಲ್ಲಿ ವೈಯ್ಯಾಲಿಕಾವಲ್ ಪೊಲೀಸರು ಶನಿವಾರ ವಶಕ್ಕೆ ಪಡೆದು, ಬಂಧಿಸಿದ್ದರು.
ಬಂಧನಕ್ಕೊಳಗಾಗಿದ್ದ ಮುನಿರತ್ನರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಭಾನುವಾರ ಆದೇಶಿಸಿತ್ತು.
ಪದೇಪದೆ ಕಿರಿಕ್’ ಮಾಡಿಕೊಂಡರೆ ಜಾಮೀನಿಗೆ ಸಮಸ್ಯೆ ಆಗುತ್ತೆ : ಜೈಲಲ್ಲಿರುವ ದರ್ಶನ್ಗೆ ಪತ್ರ ಬರೆದು ವಕೀಲರ ನೀತಿಪಾಠ


