BBMP
Loading ...

Acid Attack

ಬೆಂಗಳೂರು: ಹಾಡಹಗಲೇ ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ಉತ್ತರ ಭಾರತ ಮೂಲದ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಅಟ್ಯಾಕ್ ಮಾಡಿದ್ದಾರೆ. ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಬಾಲಾಜಿ ವೈನ್ ಸ್ಟೋರ್ ಬಳಿ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 24 ವರ್ಷದ ಯವತಿ ಮೇಲೆ ಆ್ಯಸಿಡ್ ಅಟ್ಯಾಕ್ ನಡೆದಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿಯೇ ಈ ರೀತಿಯ ಪಾಪದ ಕೃತ್ಯ ಎಸಗಿದ್ದ. ಸುಂಕದ ಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ನಾಗೇಶ್ ಎಂಬಾತ ಆ್ಯಸಿಡ್ ಎರಚಿದ್ದ.

ರಾಜ್ಯದಲ್ಲಿ ವಿದ್ಯುತ್ ಕಡಿತವಿಲ್ಲ; 24 ರಂದು ಯಲಹಂಕ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಕೆ.ಜೆ ಜಾರ್ಜ್‌

Leave a Reply

Your email address will not be published. Required fields are marked *