ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ “ಲೋಕಾ” ದಾಳಿ ನಡೆಸಿದ್ದು, ಈ ವೇಳೆ ಡ್ರಗ್ಸ್, ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿದೆ.
ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಇವತ್ತು 61 ಅಬಕಾರಿ ಅಧಿಕಾರಿಗಳ ಮೇಲೆ ಸರ್ಚ್ ಮಾಡಲಾಗಿದೆ. ಲೊಕಾಯುಕ್ತ ಕಚೇರಿಗೆ ಸುಮಾರು 132 ದೂರುಗಳು ಬಂದಿವೆ. ಅದೆಲ್ಲವನ್ನೂ ವಿಚಾರ ಮಾಡಲಾಗಿ ಜೊತೆಗೆ ಅಬಕಾರಿ ಕಚೇರಿಯ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಲು ಸರ್ಚಿಂಗ್ ಮಾಡಲಾಗುತ್ತಿದೆ. ಎಸ್ಪಿಗಳು, ಡಿವೈಎಸ್ಪಿಗಳು, ಇನ್ಸ್ ಪೆಕ್ಟರ್ ಗಳು, ಜ್ಯೂಡಿಷಲ್ ಆಫೀಸರ್ಸ್ ಹಾಗೂ ನಾನು ಮತ್ತು ಉಪಲೋಕಾಯುಕ್ತರು ಬೆಂಗಳೂರಿನ ಎಲ್ಲಾ ಕಡೆ ತುಂಬಾ ಓಡಾಡುತ್ತಿದ್ದು, ಪರಿಶೀಲನೆ ವೇಳೆ ಹಲವಾರು ಲೋಪದೋಷಗಳು ಕಂಡು ಬಂದಿವೆ ಎಂದು ಸ್ಪಷ್ಟಪಡಿಸಿದರು.


