ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್’ಐಆರ್ ದಾಖಲಿಸಿ, ಆರು ವಾರಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ ತೀರ್ಪು ನೀಡಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ರದ್ದು ಮಾಡಿ ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನೇ ನಿನ್ನೆ ಹೈಕೋರ್ಟ್ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧಿಸಿದಂತೆ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಎಫ್’ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಮುಖವಾಗಿ ಮೂರು ತಿಂಗಳ ಅವಧಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ತನಿಖಾ ವರದಿ ಸಲ್ಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಇನ್ನು, ಡಿ.24ಕ್ಕೆ ಪ್ರಕರಣದ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್! ರಾಜ್ಯಪಾಲರ ಕ್ರಮ ಎತ್ತಿಹಿಡಿದ ಹೈಕೋರ್ಟ್


