BBMP
Loading ...

Muniratna new

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್ಐಟಿ ವಶದಲ್ಲಿ ಇದ್ದಾರೆ. ಇದೀಗ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸದೆ ಕೋಟ್ಯಾಂತರ ರೂಪಾಯಿ ಬಿಲ್ ಎತ್ತಿರುವ ಆರೋಪ ಕೇಳಿ ಬಂದಿದೆ.

ಹೌದು ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಅವರ ವಿರುದ್ಧ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಕಾಮಗಾರಿ ನಡೆಸದೇ ಈ ಅವಧಿಯಲ್ಲಿ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿರುವ ಕಾರಣ ಬಿಬಿಎಂಪಿ ಕಂದಾಯ ವಿಶೇಷ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ಇದೀಗ ತನಿಖೆಗೆ ಸಮಿತಿ ರಚಿಸಿ ಆದೇಶಿಸಲಾಗಿದೆ.

ಹಾಗಾಗಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ಆರ್​ಆರ್ ನಗರ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಪಾಲಿಕೆ ಆದೇಶ ಹೊರಡಿಸಿದೆ. ಈಗಾಗಲೇ ಅವರು ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದರು. ಅದಾದ ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಇದೀಗ ಮತ್ತೆ ಜೈಲು ಸೇರಿದ್ದಾರೆ. ಇದರ ಮಧ್ಯ ಇದೀಗ ಕಾಮಗಾರಿಯ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣದಿಂದ ಶಾಸಕ ಮುನಿರತ್ನಗೆ ಕಾನೂನು ಉರುಳು ಮತ್ತಷ್ಟು ಬಿಗಿಯಾಗಲಿದೆ.

ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​: ಬಂಧನ ಆಗ್ತಾರಾ ಸಿಎಂ?!

Leave a Reply

Your email address will not be published. Required fields are marked *