BBMP
Loading ...

Vidhanasoudha

ಬೆಂಗಳೂರು : ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಿಟಿಜನ್ ಪೋರ್ಟಲ್ ಮೂಲಕ ಸಲ್ಲಿಕೆಯಾದ ಬೇಡಿಕೆಗಳ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿಗಳನ್ನು ಸಿದ್ಧಪಡಿಸಲಾಗಿದೆ. 4.85 ಲಕ್ಷ ಶೌಚಾಲಯ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, 3.60 ಲಕ್ಷ ಶೌಚಾಲಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿತ್ತು.

ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳು ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಪ್ರತಿ ಕುಟುಂಬಕ್ಕೂ ಸ್ವಚ್ಛ ಭಾರತ್ ಯೋಜನೆಯಡಿ ಕೇಂದ್ರ ಸರ್ಕಾರ 7,200 ರೂ. ಹಾಗೂ ರಾಜ್ಯ ಸರ್ಕಾರ 4,800 ರೂ. ಸೇರಿ 12 ಸಾವಿರ ರೂ. ಸಹಾಯಧನ ನೀಡುತ್ತಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ 15 ಸಾವಿರ ನಿಗದಿ ಮಾಡಲಾಗಿದೆ. ಈ ಅನುದಾನವನ್ನು ನಿಗದಿತ ಅವಧಿ ಒಳಗೆ ಖರ್ಚು ಮಾಡದ ಪಿಡಿಒಗಳನ್ನು ಅಮಾನತು ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ 30 ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪತ್ರ ಬರೆದಿದೆ.

318 ಪಂಚಾಯಿತಿಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಒಂದು ಶೌಚಾಲಯವನ್ನು ನಿರ್ಮಿಸದೆ ಅನುದಾನವನ್ನು ಹಾಗೆಯೇ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ 318 ಪಿಡಿಒಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಡಾ ಹಗರಣದಲ್ಲಿ ಎಫ್‌ಐಆರ್‌ಗೆ ಆದೇಶ: ಸಿದ್ದರಾಮಯ್ಯ ಮುಂದಿನ ನಡೆ ಏನು? ರಾಜೀನಾಮೆ ಒತ್ತಡಕ್ಕೆ ಮಣಿಯುತ್ತಾರಾ?

Leave a Reply

Your email address will not be published. Required fields are marked *