BBMP
Loading ...

Hescom Hubli

ನಿಗದಿತ ಸಮಯದಲ್ಲಿ ಬಿಲ್ ಪಾವತಿಸದಿದ್ದರೆ ಅಕ್ಟೋಬರ್ 1ರಿಂದ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಹೆಸ್ಕಾಂ ತಿಳಿಸಿದ್ದು, ವಿದ್ಯುತ್ ಬಿಲ್‌ ನೀಡಿದ ನಂತರದ 30 ದಿನಗಳೊಳಗೆ ಬಿಲ್‌ ಪಾವತಿಸದಿದ್ದಲ್ಲಿ ನಿಯಮಾವಳಿಗಳ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುತ್ತದೆ.

ಅಕ್ಟೋಬರ್ 1ರಿಂದಲೇ ಈ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸಬೇಕು ಇಲ್ಲದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ, ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಈ ವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಓಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜತೆ ಮಾಪಕ ಓದುಗರು ತೆರಳುತ್ತಿದ್ದರು. ಇನ್ನುಮುಂದೆ ಮಾಪಕ ಓದುಗರೊಂದಿಗೆ ಲೈನ್‌ಮೆನ್‌ಗಳು ತೆರಳಲಿದ್ದು, ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಿಲ್ ನೀಡುವ ಸಮಯದಲ್ಲಿಯೇ ವಿದ್ಯುತ್ ಸಂಪರ್ಕವನ್ನೂ ಸ್ಥಗಿತಗೊಳಿಸಲಿದ್ದಾರೆ. ವಿದ್ಯುತ್ ಬಿಲ್ ಪಾವತಿಗೆ ಯಾವುದೇ ಬಡ್ಡಿಯಿಲ್ಲದೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದ್ದು, ಆ ನಂತರವೂ ಬಡ್ಡಿ ಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ಇರುತ್ತದೆ ಆದರೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಹೆಸ್ಕಾಂ ಕಟ್ಟುನಿಟ್ಟಾಗಿ ತಿಳಿಸಿದೆ.

ವಿದ್ಯುತ್ ಬಾಕಿ ಮೊತ್ತ ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಸಹ ಕಡಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಆನ್‌ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಹೆಸ್ಕಾಂ ತಂತ್ರಾಂಶದಲ್ಲಿ (ಸಾಫ್ಟ್‌ವೇರ್‌) ತಾಂತ್ರಿಕ ದೋಷದಿಂದಾಗಿ ವಿವರ ನಮೂದಾಗದೇ ಇದ್ದಾಗ, ಹಿಂದಿನ ಬಿಲ್ ಮೊತ್ತವನ್ನು ತೋರಿಸುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಹೆಸ್ಕಾಂ ಸಿಬ್ಬಂದಿಗೆ ಆನ್‌ಲೈನ್‌ನಲ್ಲಿ ಬಿಲ್ ಪಾವತಿಸಿದ ರಸೀದಿ ತೋರಿಸಿದರೆ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಹೆಸ್ಕಾಂ ತಿಳಿಸಿದೆ.

ಬೆಂಗಳೂರಲ್ಲಿ ನಾಯಿ ಕಚ್ಚುವುದು ತಪ್ಪಿಸಲು ಹೊಸ ರೂಲ್ಸ್‌ ಮತ್ತು ಪ್ಲಾನ್ ಏನದು?

Leave a Reply

Your email address will not be published. Required fields are marked *