BBMP
Loading ...

Blood Letter

ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು ನಾಳೆಯಿಂದ ತನಿಖೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ ಇದರ ಮಧ್ಯ ಈ ಒಂದು ಹಗರಣದಲ್ಲಿ ನೀವು ರಾಜೀನಾಮೆ ನೀಡಬೇಡಿ ಎಂದು ಸಿದ್ದರಾಮಯ್ಯ ಅಭಿಮಾನಿ ಒಬ್ಬರು ರಕ್ತದ ಮೂಲಕ ಪತ್ರ ಬರೆದು ಮನವಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಹೌದು ರಾಜೀನಾಮೆ ನೀಡದಂತೆ ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಮಂಡ್ಯ ಜಿಲ್ಲೆಯ ಮುತ್ತಹಳ್ಳಿಯ ಸಚಿನ್, ಅರಸು ಬಳಿಕ ಅತಿ ಹೆಚ್ಚು ಸರಕಾರಿ ಯೋಜನೆ ನೀಡಿದ್ದೀರಿ. ಬಡ ಜನರಿಗೆ ಅತಿ ಹೆಚ್ಚು ಯೋಜನೆ ನೀಡಿದ ಮುಖ್ಯಮಂತ್ರಿ ನೀವು. ಬಡವರು ಹಾಗೂ ದೀನ ದಲಿತರ ಪರವಾಗಿರುವಂತಹ ಮುಖ್ಯಮಂತ್ರಿಗಳು ನೀವು. ಮುಡಾ ಹಗರಣದಲ್ಲಿ ನೀವು ರಾಜೀನಾಮೆ ನೀಡಬಾರದು ನಿಮ್ಮೊಂದಿಗೆ ನಾವಿದ್ದೇವೆ ಎಂದು ರಕ್ತದಲ್ಲಿ ಸಚಿನ್ ಪತ್ರ ಬರೆದಿದ್ದಾರೆ.

ನಾಳೆಯಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ‘ಲೋಕಾಯುಕ್ತ’ ತನಿಖೆ ಆರಂಭ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸೊಮವಾರವಾದ ನಾಳೆಯಿಂದ ತನಿಖೆ ಆರಂಭವಾಗಲಿದೆ. ‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.

ವಿದ್ಯುತ್ ಬಿಲ್‌ ಪಾವತಿಸದಿದ್ದರೆ ಕರೆಂಟ್ ಕಟ್​​: ಅಕ್ಟೋಬರ್ 1ರಿಂದಲೇ ನಿಯಮ ಜಾರಿ, ಹೆಸ್ಕಾಂ ಎಚ್ಚರಿಕೆ

Leave a Reply

Your email address will not be published. Required fields are marked *