BBMP
Loading ...

Yatnal

ದಾವಣಗೆರೆ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಅಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದು, ಕೆಲವರು ಸಿಎಂ ಸ್ಥಾನಕ್ಕಾಗಿ ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ಇಂದು ದಾವಣಗೆರೆಯಲ್ಲಿ ಮಜಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ.ಇದರಲ್ಲಿ ಕಾಂಗ್ರೆಸ್​ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಸಾವಿರ ಕೋಟಿ ಹಣ ಇಟ್ಟುಕೊಂಡು ಸಿಎಂ ಆಗಲು ಸಿದ್ಧರಿದ್ದಾರೆ ಎಂದು ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್​ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.

ಮುಡಾ ಹಗರಣದಲ್ಲಿ ರಾಜೀನಾಮೆ ನೀಡಬೇಡಿ : ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ!

Leave a Reply

Your email address will not be published. Required fields are marked *