BBMP
Loading ...

Mumtaz Ali

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್, ಮಮ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಮ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್ ಓ ಸಿ ಜಾರಿ ಮಾಡಿದ್ದೇವೆ. ನಿನ್ನೆ ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಬೆಳಿಗ್ಗೆ 10 ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಸಿಕ್ಕಿದೆ.ಮುಮ್ತಾಜ್ ಅಲಿ ಸಹೋದರ ಕಾವೂರು ಠಾಣೆಗೆ ದೂರು ನೀಡಿದ್ದಾರೆ.ಹನಿ ಟ್ರ್ಯಾಪ್ ಮಾಡಿದ್ದಾರೆಂದು ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಆರು ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ಮೂರು ತಿಂಗಳಿನಿಂದ ಖಿನ್ನತೆಯಲ್ಲಿ ಇರುವುದರ ಬಗ್ಗೆ ಉಲ್ಲೇಖಿಸಲಾಗಿದೆ. ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಸೆಕ್ಸ್ ವೀಡಿಯೊ ಆಧಾರದಲ್ಲಿ ಮುಮ್ತಾಜ್ ಗೆ ಬೆದರಿಕೆ ಹಾಕಿದ ಬಗ್ಗೆ ದೂರು ಸಲ್ಲಿಕೆಯಾಗಿದೆ.

ಈ ಬಗ್ಗೆ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ. ಮಾಡುತ್ತಿದ್ದೇವೆ. ಅಲ್ಲದೆ ವಾಯ್ಸ್ ನೋಟ್ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಮುಮ್ತಾಜ್ ಹೇಳಿದ್ದಾರೆ. ಆರೋಪಿ ರೆಹಮತ್ ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್ ಗೆ ಮುಮ್ತಾಜ್ ಅಲಿ ಕಾರು ಡಿಕ್ಕಿಯಾಗಿದೆ. ಬಸ್ ನವರ ಹೇಳಿಕೆಯನ್ನು ಪಡೆದಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದರು.

ರಾಜ್ಯದ ವಿವಿಧ ಆರ್​ಟಿಒ ಚೆಕ್ ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ: ಲಕ್ಷಾಂತರ ರೂಪಾಯಿ ನಗದು, ದಾಖಲೆ ವಶ!

Leave a Reply

Your email address will not be published. Required fields are marked *