ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಆರ್ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.
ಮುಡಾ ಹಗರಣ ಸಂಬಂಧ ಇಡಿ ಸ್ನೇಹಮಯಿ ಕೃಷ್ಣ ಅವರಿಗೆ ಸಮ್ಸನ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಅದರಂತೆ ಸ್ನೇಹಮಯಿ ಕೃಷ್ಣ ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ ಹಗರಣ ಸಂಬಂಧ 500 ಪುಟಗಳ ದಾಖೆಯನ್ನು ಇಡಿಗೆ ನೀಡಿದ್ದರು.
ಇದೀಗ ಇಡಿ, ಮುಡಾ ಕಚೇರಿ ಮತ್ತು ಭೂ ಮಾಲೀಕ ದೇವರಾಜು ಮನೆ ಮೇಲೆ ದಾಳಿ ಮಾಡಿದೆ. ಹಗರಣದಲ್ಲಿ ದೇವರಾಜು ಎ4 ಆಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.


