BBMP
Loading ...

ಬೆಂಗಳೂರು: ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಇನ್ನೂ ಮುಂದೆ ಪರೀಕ್ಷೆಗೆ ಕಠಿಣ ನಿಯಮ ಜಾರಿ ಆಗಲಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಇದು ಶಾಕಿಂಗ್ ನ್ಯೂಸ್ ಅಂತಲೇ ಹೇಳಬಹುದು. ಮುಖ್ಯ ಪರೀಕ್ಷೆಗೆ ಇನ್ನೂ ಕಠಿಣ ನಿಯಮ ಜಾರಿ ಆಗಲಿದ್ಯಂತೆ.

ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಈ ವರ್ಷ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ಹೊರತಂದಿತ್ತು. ಆದರೆ, ಈ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆನ್ಲೈನ್ ಅಲ್ಲಿ ಸೋರಿಕೆಯಾಗಿದೆ. ಶಿಕ್ಷಣ ಇಲಾಖೆಯ ಈ ಎಡವಟ್ಟು ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವಂತೆ ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಸಖತ್ ಗರಂ ಆಗಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿದೆ. ಮುಂಬರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಪ್ರಶ್ನಪತ್ರಿಕೆ ಲೀಕ್ ತಡೆಯಲು ಮುಂದಾಗಿದೆ. ಪ್ರತಿಯೊಂದು ಕೊಠಡಿಗೂ ಸಿಸಿಟಿವಿ ಕ್ಯಾಮರ ಹಾಗೂ ತಾಲೂಕು ಮಟ್ಟದಲ್ಲಿ ನೋಡಲ್ ಕೇಂದ್ರ ವೆಬ್ ಕಾಸ್ಟಿಂಗ್ ಮತಷ್ಟು ಬಲಪಡಿಸಲು ಮುಂದಾಗಿದೆ.

ಶಿಕ್ಷಣ ಸಚಿವರಿಂದ ಖಡಕ್ ಎಚ್ಚರಿಕೆ
ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ನಕಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ

ಏತನ್ಮಧ್ಯೆ, ಮದ್ಯವಾರ್ಷಿಕ ಪರೀಕ್ಷೆಯಲ್ಲಿಯೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು ನಗೆಪಾಟಲಿಗೆ ಕಾರಣವಾಗಿದೆ. ಸದ್ಯ ಕಠಿಣ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.

ಬೆಂಗಳೂರು: ಆಯತಪ್ಪಿ ಕೆಂಗೇರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿದ ಅಣ್ಣ – ತಂಗಿ! ಶೋಧ ಕಾರ್ಯ ಬಿರುಸು

Leave a Reply

Your email address will not be published. Required fields are marked *