BBMP
Loading ...

Hasanamba

ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ಮ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.

ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್‌ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಆಗಮಿಸಲಿದ್ದಾರೆ.

ಒಟ್ಟು 11 ದಿನದಲ್ಲಿ 9 ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದಿನದ 24 ಗಂಟೆಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 3ರಂದು ಪುನಃ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುವುದು. ದೇವಿ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬಾಬುಸಾಬ್ ಪಾಳ್ಯ ಕಟ್ಟಡ ದುರಂತ ಪ್ರಕರಣ: ಬಿಬಿಎಂಪಿ AEE ಅಮಾನತು; 3 ನೊಟೀಸ್ ಕೊಟ್ಟರೂ ಕ್ಯಾರೆ ಎನ್ನದ ಮಾಲೀಕ!

Leave a Reply

Your email address will not be published. Required fields are marked *