ಬೆಂಗಳೂರು: ಲೇಔಟ್‌ಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಎಇಇ ಮತ್ತು ಎಸ್‌ಒ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಸ್ಕಾಂನಲ್ಲಿ ಲಂಚ ತಾಂಡವವಾಡುತ್ತಿದೆ ಎನ್ನುವುದಕ್ಕೆ ಈ ಪ್ರಕರಣ ತಾಜಾ ಉದಾಹರಣೆಯಾಗಿದೆ. ಇಂಥ ಭ್ರಷ್ಟ ಅಧಿಕಾರಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ಉಳಿದವರಿಗೆ ಕಠಿಣ ಸಂದೇಶವನ್ನು ರವಾನಿಸಬೇಕಿದೆ.
ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅವಲಹಳ್ಳಿ ಬೆಸ್ಕಾಂ ಎಇಇ ರಮೇಶ್ ಬಾಬು ಮತ್ತು ಎಸ್ ಒ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು.
ಬೆಂ.ಗ್ರಾಮಾಂತರ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಸರ್ವೆ ನಂ. 101/33, 149 ಜಮೀನಿನಲ್ಲಿ ನಿರ್ಮಾಣ ಮಾಡಿರುವ ಪಿ.ಮುತ್ತುಸ್ವಾಮಿ ಎಂಬುವರ ಲೇಔಟ್‌ಗೆ ವಿದ್ಯುತ್ ಸಂಪರ್ಕ ನೀಡಲು ಶ್ರೀ ಚಕ್ರ ಎಲೆಕ್ಟಿಕಲ್‌ನ ಸೀನಿಯರ್ ಮ್ಯಾನೇಜರ್ ವಿಜಯಕುಮಾರ್ ಎಂಬುವರ ಬಳಿ ಅವಲಹಳ್ಳಿ ಬೆಸ್ಕಾಂ ಎಇಇ ರಮೇಶ್ ಬಾಬು ಅವರು ಸೆಕ್ಷನ್ ಆಫೀಸರ್ ನಾಗೇಶ್ ಮೂಲಕ 16.50ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಕುರಿತು ವಿಜಯಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿನ ಹಿನ್ನೆಲೆ ಗುರುವಾರ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬೊಮ್ಮೇನಹಳ್ಳಿಯ ನ್ಯೂ ರಾಯಲ್ ಪ್ರೆಷ್ ಮಾರ್ಟ್ ಬಳಿ ಲಂಚವನ್ನು ಪಡೆಯುವಾಗ ಎಸ್ ಒ ನಾಗೇಶ್ ಅವರನ್ನು ಹಣದ ಸಮೇತ ಬಂಧಿಸಿದ್ದಾರೆ. ಲಂಚ ನೀಡುವಂತೆ ತಿಳಿಸಿದ್ದ ಎಇಇ ರಮೇಶ್ ಬಾಬು ಅವರನ್ನೂ ಸಹ ದಸ್ತಗಿರಿ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕ ಪವನ್ ನೆಟ್ಟೂರ್ ಮಾರ್ಗದರ್ಶನದಂತೆ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಹಾಗೂ ಸಿಬ್ಬಂದಿ ವರ್ಗದವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

16 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಬೆಸ್ಕಾಂ AEE, AE: ಇತಿಹಾಸದಲ್ಲೇ ಅತಿ ದೊಡ್ಡ ಲಂಚ
ಹಾಸನಾಂಬ ದೇಗುಲದ ಗರ್ಭಗುಡಿ ಓಪನ್: ಆನ್ಲೈನ್ ಟಿಕೆಟ್ ಬುಕಿಂಗ್ ಸೇರಿದಂತೆ ಇನ್ನಿತರ ಪ್ರಮುಖ ಮಾಹಿತಿ ಇಲ್ಲಿದೆ


