BBMP
Loading ...

ಬೆಂಗಳೂರು: ಸಿನಿಮಾ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ.

ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸಿ ಸರ್ಕಾರದಿಂದ ಆದೇ ಹೊರಡಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗಿದೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್, ಸಾ.ರಾ ಗೋವಿಂದು ನೇತೃತ್ವದ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಮನವಿ ಮಾಡಿದೆ

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಾ.ರಾ ಗೋವಿಂದು, ಇತ್ತೀಚೆಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಚಿತ್ರಮಂದಿರಗಳಲ್ಲಿ ಪ್ರವೇಶ ದರ ದುಬಾರಿಯಾಗಿದ್ದು, ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೂ ಟಿಕೆಟ್ ದರ ನಿಗದಿಪಡಿಸಲಾಗುತ್ತಿದೆ. ಇದರಿಂದ ಕನ್ನಡ ಪ್ರೇಕ್ಷಕರಿಗೆ ಹೊರೆಯಾಗಿರುತ್ತದೆ. ಹಾಗಾಗಿ ಟಿಕೆಟ್‌ ದರ 200 ರೂ. ಮೀರದಂತೆ ನಿಗದಿಪಡಿಸುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಹಾಗೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ತೆರವು ಕಾರ್ಯ ಆರಂಭ

Leave a Reply

Your email address will not be published. Required fields are marked *