ಬೆಂಗಳೂರು : ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರೆ ಆರೋಗ್ಯ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಆಯೋಗ ತಿಳಿಸಿದೆ.
ಈ ಅಕ್ರಮ ಸಂಬಂಧ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಆಯೋಗವು ಶಿಫಾರಸು ಮಾಡಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಆ.25, 2023ರಲ್ಲಿ ರಚನೆಯಾಗಿದ್ದ ತನಿಖಾ ಆಯೋಗ ಸರಕಾರಕ್ಕೆ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಅಲ್ಲದೆ, ಈ ಆಯೋಗವು ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದಾಗಿ ಹೇಳಿದೆ.


