BBMP
Loading ...

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಸುಪ್ರೀಂಕೋರ್ಟ್​ನಲ್ಲೂ ಬಿಗ್​ ಶಾಕ್​ ಎದುರಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉನ್ನತ ನ್ಯಾಯಾಲಯ ಇಂದು ( ನ.11) ವಜಾಗೊಳಿಸಿದ್ದು, ಹಾಸನದ ಮಾಜಿ ಸಂಸದರಿಗೆ ಜೈಲೇ ಗತಿಯಾಗಿದೆ.

ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನೆ ಮಾಡಿ, ಪ್ರಜ್ವಲ್​ ರೇವಣ್ಣ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್​ ವಿರುದ್ಧ ಆರೋಪ ಮಾಡಲಾಗಿದೆ. ಹೀಗಾಗಿ ಅವರಿಗೆ ಜಾಮೀನು ನೀಡಬೇಕೆಂದು ಅವರ ಪರ ವಕೀಲ ಮುಕುಲ್​ ರೋಹ್ಟಗಿ ವಾದಿಸಿದರು. ಆದರೆ, ಅವರ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಜ್ವಲ್​ ರೇವಣ್ಣಗೆ ಬಿಗ್​ ಶಾಕ್​ ನೀಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

ಅಂದಹಾಗೆ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿದೆ. ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನೆ ಮಾಡಿ ಪ್ರಜ್ವಲ್​ ರೇವಣ್ಣ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ಅಲ್ಲೂ ಹಿನ್ನೆಡೆಯಾಗಿದೆ.

ಬೆಂಗಳೂರಿನ ಜನರಿಗೆ ಹೊಸ ವರ್ಷಕ್ಕೆ ಹೊಸ ಶುಲ್ಕದ ಬರೆ: ಮನೆಯಿಂದ ಕಸ ಸಂಗ್ರಹಿಸಲು 400 ರೂ. ಕೊಡಬೇಕಾಗುತ್ತೆ

Leave a Reply

Your email address will not be published. Required fields are marked *