BBMP
Loading ...

Siddaramaiah-fb-1024x576

ಬೆಂಗಳೂರು:- ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಅಸ್ತು ಎಂದಿದೆ.

ಸಿಎಂಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಹಗರಣದ ಬಗ್ಗೆ ಚರ್ಚೆ ನಡೆದಿದ್ದು, ತನಿಖೆಗಾಗಿ SIT ತಂಡ ರಚಿಸಲು ಸಂಪುಟ ಅಸ್ತು ಅಂದಿದೆ.

ಕೊವಿಡ್​ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​ಕೆ ಪಾಟೀಲ್, ಕೊವಿಡ್​ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಕೊವಿಡ್​ ಹಗರಣದ ತನಿಖೆಗೆ ಎಸ್​ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ . ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್​ಶೀಟ್ ಕೂಡ ಹಾಕ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಬಿಎಸ್​ವೈ, ರಾಮುಲು ಕಾರ್ಯವೈಖರಿಗೆ ಸಮಿತಿ ಅಕ್ಷೇಪ ವ್ಯಕ್ತಪಡಿಸಿದೆ. ಖಾಸಗಿ ಲ್ಯಾಬ್​ಗಳಿಗೆ 6.93ಕೋಟಿ ಹಣ ಸಂದಾಯವಾಗಿದೆ. ಆದ್ರೆ 14 ಲ್ಯಾಬ್​ಗಳು ICMRನಿಂದ ಮಾನ್ಯತೆ ಪಡೆದಿಲ್ಲ. ಈ ICMR ಲ್ಯಾಬ್​ಗಳು ಅಧಿಕೃತ ಅಲ್ಲ ಎಂದು ಜಾನ್ ಮೈಕೆಲ್ ಡಿ ಕುನ್ಹಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

RTPCR ಟೆಸ್ಟ್​ಗೆ ಲ್ಯಾಬ್​ಗಳ ಸಾಮರ್ಥ್ಯ, ಕ್ಷಮತೆ ಗುರುತಿಸಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಲ್ಯಾಬ್​ಗಳಿಗೆ ಅನುಮತಿ ನೀಡಲಾಗಿದೆ. 6 ಖಾಸಗಿ ಲ್ಯಾಬ್ ಗಳಿಗೆ ಒಪ್ಪಂದವಿಲ್ಲದೆ ಹಣ ಸಂದಾಯ ಮಾಡಲಾಗಿದೆ. ಅನಧಿಕೃತವಾಗಿ ಲ್ಯಾಬ್​ಗಳಿಗೆ ಹಣ ಸಂದಾಯದ ಬಗ್ಗೆ ಮಧ್ಯಂತರ ವರದಿ ನೀಡಲಾಗಿದೆ.

Leave a Reply

Your email address will not be published. Required fields are marked *