BBMP
Loading ...

liquor-sale-policy

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ.

ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಅಸೋಶಿ ಯೇಶನ್ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಅಬಕಾರಿ ಕಾಯ್ದೆಯ ಕಲಂ 29 ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು. ಚಿಲ್ಲರೆ ಲದೆ ಮಾರಾಟದ ಮೇಲೆ ಮದ್ಯ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್‌ಗೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಿ, ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಜನತೆಗೆ ಗುಡ್‌ನ್ಯೂಸ್‌ ಕೊಟ್ಟ ಬಿಬಿಎಂಪಿ: ಇ-ಖಾತೆ ಪಡೆಯಲು ಇನ್ಮುಂದೆ ಆಧಾರ್‌ ಕಡ್ಡಾಯವಲ್ಲ!

Leave a Reply

Your email address will not be published. Required fields are marked *