BBMP
Loading ...

liquor-sale-policy

ಬೆಂಗಳೂರು: ಎಣ್ಣೆ ಪ್ರಿಯರಿಗೆ ಗುಡ್​ನ್ಯೂಸ್ ಸಿಕ್ಕಿದ್ದು, ನ. 20ರ ಮದ್ಯ ಮಾರಾಟ ಬಂದ್ ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ.

ನಿನ್ನೆ (ನ.19) ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕದ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಇನ್ನು ಅವರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಬಾರ್ ಅಸೋಸಿಯೇಷನ್, ನವೆಂಬರ್‌ 20ರ ಬುಧವಾರದ ಮದ್ಯ ಮಾರಾಟ ಬಂದ್​ ಕರೆ ವಾಪಸ್ ಪಡೆದುಕೊಂಡಿದೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​​​ರಾಜ್ಯಾದ್ಯಂತ ಎಲ್ಲಾ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು.

ಆದ್ರೆ, ಕರ್ನಾಟಕ ಬಾರ್ ಅಸೋಸಿಯೇಷನ್ ಇಂದು(ನವೆಂಬರ್ 19) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿದ್ದ, ಅದು ಸಫಲವಾಗಿದೆ. ಹೀಗಾಗಿ ಬಾರ್ ಅಸೋಸಿಯೇಷನ್ ನೀಡಿದ್ದ ನಾಳಿನ ಬಂದ್​ ವಾಪಸ್ ಪಡೆದುಕೊಂಡಿದೆ. ಸಿಎಂ ಭೇಟಿ ಬಳಿಕ ಸ್ವತಃ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಸ್ಪಷ್ಟಪಡಿಸಿದ್ದಾರೆ.

ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳ ಸಾವು ಪ್ರಕರಣ: ಬೆಸ್ಕಾಂ ಇಂಜಿನಿಯರ್ ವಿರುದ್ಧ ಹೈಕೋರ್ಟ್ ಆಕ್ರೋಶ

Leave a Reply

Your email address will not be published. Required fields are marked *