BBMP
Loading ...

images

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ. ಫೋನ್​ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್​ಅನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು ಮುನಿರತ್ನ ಅವರ ಧ್ವನಿ ಎಂದು ದೃಢವಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್​ಐಆರ್ ದಾಖಲಾಗಿತ್ತು.

ಬಳಿಕ ಸೆ.14ರಂದು ಎಸ್​ಐಟಿ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. ಆ ವೇಳೆ ಪೆನ್ ಡ್ರೈವ್ ಆಡಿಯೋ ಕ್ಲಿಪ್ ಹಾಗೂ ಬಂಧನ ವೇಳೆ ಪಡೆಯಲಾಗಿದ್ದ ಶಾಸಕ ಮುನಿರತ್ನ ವಾಯ್ಸ್ ಸ್ಯಾಂಪಲ್ ಅನ್ನು ಎಫ್​ಎಸ್ಎಲ್​ಗೆ ಕಳುಹಿಸಿದರು. ಈಗ ಎಫ್ಎಸ್​ಎಲ್ ರಿಪೋರ್ಟ್ ಎಸ್ಐಟಿ ಪೊಲೀಸರ ಕೈಸೇರಿದ್ದು, ಮುನಿರತ್ನ ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಆಡಿಯೋ ಧ್ವನಿ ಧೃಡವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಮುನಿರತ್ಮಗೆ ಮತ್ತೆಗೆ ಸಂಕಷ್ಟು ಎದುರಾಗುವುದು ಕಟ್ಟಿಟ್ಟ ಬುತ್ತಿ.

ಈ ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಆಚೆ ಬಂದಿದ್ದರು. ಬಳಿಕ ಅತ್ಯಾಚಾರ ಪ್ರಕರಣದಲ್ಲೂ ಸಹ ಮತ್ತೆ ಜೈಲು ಸೇರಿದ್ದರು. ಬಳಿಕ ಆ ಪ್ರಕರಣದಲ್ಲೂ ಸಹ ಜಾಮೀನನ ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ ಮತ್ತೆ ಜಾತಿ ನಿಂದನೆ ಪ್ರಕರಣ ಮುನಿರತ್ನ ಅವರಿಗೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಿವೆ.

Leave a Reply

Your email address will not be published. Required fields are marked *