BBMP
Loading ...

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಮಕೂರಿನ ಕಾಂಗ್ರೆಸ್​ ಮಾಜಿ ಶಾಸಕ ಆರ್. ನಾರಾಯಣ್ (81) ಇಂದು ( ಡಿ.12) ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣ್​ ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 8.30ಕ್ಕೆ ಕೊನೆಯುಸಿರೆಳೆದಿದ್ದಾರೆ. ತುಮಕೂರಿನ ರೈಲ್ವೆ ನಿಲ್ದಾಣದ ಸಿಎಸ್​ಐ ಲೇಜೌಟ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾರಾಯಣ್​ ಅವರು ತುಮಕೂರಿನ ಬೆಳ್ಳಾವಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಮಂಗಳವಾರ (ಡಿ.10) ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ನಿಧನರಾದರು. ಅವರ ಅಂತ್ಯಕ್ರಿಯೆ ನಿನ್ನೆ (ಡಿ.11) ಮಂಡ್ಯ ಜಿಲ್ಲೆಯ ಮದ್ದೂರಿನ ಅವರ ಹುಟ್ಟೂರಾದ ಸೋಮನಹಳ್ಳಿಯಲ್ಲಿ ನೆರವೇರಿಸಲಾಯಿತು.

ಬೆಂಗಳೂರು: ಈ ಬಾರಿ ಅರಮನೆ ಆವರಣದಲ್ಲಿ 50ನೇ ವಾರ್ಷಿಕ ಕೇಕ್ ಪ್ರದರ್ಶನ; ರಾಮ ಮಂದಿರ ವಿಶೇಷ!

Leave a Reply

Your email address will not be published. Required fields are marked *