BBMP
Loading ...

Darshan

ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನ್ಯಾಪ್ ಅಂಡ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 7 ತಿಂಗಳ ಬಳಿಕ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಜಾಮೀನು ಸಿಕ್ಕಿದೆ. ಇದು ಅವರ ಅಭಿಮಾನಿ ಬಳಗ, ಆಪ್ತರು, ಕುಟುಂಬದ ಸಂತೋಷ ದುಪ್ಪಟ್ಟು ಮಾಡಿದೆ.

ಕಳೆದ ಆರು ವಾರಗಳಿಂದ ನಟ ದರ್ಶನ್ ಮೆಡಿಕಲ್ ಬೇಲ್ ಮೇಲೆ ಹೊರಗಿದ್ದಾರೆ. ಹೀಗಾಗಿ ನಟಿ ಪವಿತ್ರಾಗೌಡ ಸೇರಿ ಉಳಿದ ಆರು ಮಂದಿ ಬಿಡುಗಡೆಗೆ ಪ್ರಕ್ರಿಯೆಗಳು ಶುರುವಾಗಿವೆ. ಸೋಮವಾರ ಇವರು ಜೈಲಿಂದ ಬಿಡುಗಡೆಯಾಗುವ ಸಂಭವ ಇದೆ. ಪವಿತ್ರಾ ಗೌಡಗೆ ಬೇಲ್ ಸಿಗುತ್ತಲೇ ನ್ಯಾಯಾಲಯದಲ್ಲಿ ಹಾಜರಿದ್ದ ಅವರ ತಾಯಿ ಆನಂದಭಾಷ್ಪ ಸುರಿಸಿದರು.

ನಟ ದರ್ಶನ್ ಸರ್ಜರಿ ಮಾಡಿಸಿಕೊಳ್ತಾರಾ? ಮಾಡಿಸಿಕೊಳ್ಳಲ್ವಾ ಎನ್ನುವ ಕುತೂಹಲ ಮುಂದುವರೆದಿದೆ. ಅಂದ ಹಾಗೇ, ಪ್ರಕರಣದ ಒಟ್ಟು 17 ಅರೋಪಿಗಳ ಪೈಕಿ ಈ ಮೊದಲೇ ಐವರಿಗೆ ಜಾಮೀನು ಸಿಕ್ಕಿತ್ತು. ಈಗ ಏಳು ಮಂದಿಗೆ ಬೇಲ್ ಸಿಕ್ಕಿದೆ. ಉಳಿದ ಐವರು ಆರೋಪಿಗಳಿಗೆ ಮಾತ್ರ ಜಾಮೀನು ಸಿಕ್ಕಿಲ್ಲ. ಈ ಮಧ್ಯೆ ದರ್ಶನ್ ಸೇರಿ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದ್ದಾರೆ

ಜಾಮೀನು ಮೊದಲ ನಿಯಮ. ಆರೋಪಿಗಳಿಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆರೋಪಿಗಳು 6 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಬಂಧನ ಮಾಡುವಾಗ ನಿಯಮಗಳ ಪಾಲನೆ ಆಗಿಲ್ಲ. ಬಂಧನ ವೇಳೆ ಆರೋಪಿಗೆ ಬಂಧನದ ಕಾರಣ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಆದೇಶವಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಗ್ರೌಂಡ್ಸ್ ಆಫ್ ಅರೆಸ್ಟ್ ಪಾಲಿಸಿಲ್ಲ. ಆರೋಪಿಗಳ ನಿರ್ದಿಷ್ಟ ಪಾತ್ರದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯಲ್ಲೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತು.

ಇನ್ನೂ ರಾಷ್ಟ್ರದ ಗಮನ ಸೆಳೆದಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್‌ ಪೀಠ ಆದೇಶಿಸಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ.

ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್, ಬ್ಯಾನರ್‌ ಅಳವಡಿಕೆ; ಶಿಕ್ಷೆಗೆ ಕಾನೂನು ರೂಪಿಸದ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಗರಂ

Leave a Reply

Your email address will not be published. Required fields are marked *