BBMP
Loading ...

PSI

ಬೆಂಗಳೂರು: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಆಗಿದ್ದು, ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸಿವಿ ರಾಮನ್ ನಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್‌ನೋಟ್‌ನಲ್ಲಿ ಏನಿದೆ?
ನಾನು ನನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿಯ ತಂದೆಯಾದ ಯಮುನಪ್ಪ ಇವನು ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ಡಿ.12 ರಂದು ದೂರವಾಣಿ ಕರೆ ಮಾಡಿ ಮಾತನಾಡಿ ಬೆದರಿಕೆ ಹಾಕಿರುತ್ತಾನೆ. ಬೆಳಗ್ಗೆ ನಾನು ಕಾಲ್ ಮಾಡಿದಾಗಲೂ ಕೂಡ, ‘ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಬೈದಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ನಟ ದರ್ಶನ್​ಗೆ ಜಾಮೀನು ಸಿಗಲು ಇದೇ ಕಾರಣ! ಪೊಲೀಸರ ಮಾಡಿದ ಎಡವಟ್ಟು ಉಲ್ಲೇಖಿಸಿದ ಜಡ್ಜ್!

Leave a Reply

Your email address will not be published. Required fields are marked *