BBMP
Loading ...

Muniratna new

ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದ್ದು, ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ವನ್ನು CID ಸಾಬೀತುಪಡಿಸಿದೆ.

ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ. ತಮ್ಮ ವಿರೋಧಿಗಳನ್ನು ಹೆಚ್​ಐವಿ-ಏಡ್ಸ್ ​​ಪೀಡಿತರ ಮೂಲಕ ಹನಿಟ್ರ್ಯಾಪ್​​ ಬಲಗೆ ಬೀಳಿಸಿ ಏಡ್ಸ್​​ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್​ಐಟಿ ಸಲ್ಲಿಸಿದ ಚಾರ್ಜ್​​​ಶೀಟ್​ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್​ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್​​ಪೆಕ್ಟರ್​​ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್​ಐಟಿ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್​​ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್​ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಎಸ್​ಐಟಿ ಸಲ್ಲಿಕೆ ಮಾಡಿದೆ.

ಆನ್​ಲೈನ್​ನಲ್ಲಿ ದಾಖಲೆ ಸಲ್ಲಿಸಿ ಇ–ಖಾತಾ ಪಡೆಯಿರಿ; ಆಸ್ತಿ ಮಾಲೀಕರಿಗೆ ಬಿಬಿಎಂಪಿ ಸೂಚನೆ

Leave a Reply

Your email address will not be published. Required fields are marked *