BBMP
Loading ...

Dayanand

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತೀ ವರ್ಷವೂ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿರುತ್ತದೆ. ಮದ್ಯರಾತ್ರಿಯಾದರೂ ಸಂಭ್ರಮ ಮುಗಿದಿರುವುದಿಲ್ಲ. ಮಾತ್ರವಲ್ಲ ಕುಡಿದು ನಶೆಯಲ್ಲಿ ಮೈಮರೆತಿರುತ್ತಾರೆ ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿದೆ.

ನ್ಯೂ ಇಯರ್ ಗೆ ಪ್ರತೀ ಭಾರಿ ಕೇಂದ್ರ ವಿಭಾಗವೇ ಫೆವರೇಟ್. ಈ ಬಾರಿಯೂ ಈಗಿನಿಂದಲೇ ಸೆಂಟ್ರಲ್ ಪೊಲೀಸರು ಅಲರ್ಟ್ ಆಗಿದ್ದಾರೆ. ಹೊಸ ವರ್ಷಕ್ಕೆ ಬ್ರಿಗೇಡ್ ರೋಡ್, ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಸಜ್ಜಾಗಿದೆ. ಇದೀಗ ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್​ಗಳನ್ನು ಹೊಸ ವರ್ಷಾಚರಣೆ ದಿನ (ಡಿಸೆಂಬರ್​.31) ರಂದು ರಾತ್ರಿ 1 ಗಂಟೆಯ ಒಳಗಾಗಿ ಬಂದ್​​ ಮಾಡಬೇಕೆಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ.

ಅಂದು, ನಶೆಯಲ್ಲಿ ಮೇಲ್ಸೇತುವೆಗಳ ಮೇಲೆ ರಂಪಾಟ ಮಾಡುವ, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೇಲ್ಸೇತುವೆ ಸೇರಿದಂತೆ ನಗರದ ಎಲ್ಲ ಮೇಲ್ಸೇತುವೆಗಳನ್ನು ಬಂದ್​ ಮಾಡಲಾಗುತ್ತದೆ ಎಂದರು.

ಬೆಂಗಳೂರು ಹೊರ ವಲಯದಲ್ಲಿ ನಡೆಯುವ ರೇವ್ ಪಾರ್ಟಿ ಸೇರಿದಂತೆ ಎಲ್ಲ ಪಾರ್ಟಿಗಳ ಮೇಲೆ ಕಣ್ಣಿಡಲಾಗಿದೆ. ಇನ್ನು, ನಗರದಲ್ಲಿ ಎಂಜಿ ರೋಡ್, ಬ್ರಿಗೆಡ್ ರೋಡ್, ಕೋರಮಂಗಲ, ಇಂದಿರಾನಗರ ಸೇರಿ ಎಲ್ಲಿ ಹೆಚ್ಚು ಜನರು ಸೇರುತ್ತಾರೆ ಅಲ್ಲಿ ಸೇಫ್ಟಿ ಐಲ್ಯಾಂಡ್, ಸಿಸಿಟಿವಿ, ಡ್ರೋಣ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಶ್ವಾನದಳದಿಂದ ತಪಾಸಣೆ ಮಾಡಲಾಗುತ್ತೆ. ಹೆಚ್ಚಿನ ಲೈಟಿಂಗ್ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ, ಅಗ್ನಿಶಾಮಕ ದಳ ವಾಹನ ಇರುತ್ತದೆ ಎಂದು ತಿಳಿಸಿದರು.

ಬ್ರಿಗೆಡ್, ಎಂಜಿ ರೋಡ್​​ನಲ್ಲಿ ಏಕಮುಖ ಸಂಚಾರವಿರುತ್ತದೆ. ಡಿಸೆಂಬರ್​ 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಸೈಬರ್ ವಂಚನೆಗೆ ಒಳಗಾಗಿದ್ದರೆ ಟೋಲ್ ಫ್ರೀ ನಂಬರ್ 1930ಗೆ ಕರೆ ಮಾಡಿ ಮಾಹಿತಿ ನೀಡಿ. ಅದನ್ನ ಹೊರತುಪಡಿಸಿ ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ನಂಬರ್​​ಗೆ ಕರೆ ಮಾಡಬೇಡಿ. ಏಕೆಂದರೆ, ಅಧಿಕಾರಿಗಳು ಬೇರೆ ಕೆಲಸದಲ್ಲಿ ನಿರತರಾಗಿದ್ದರೆ ಕೂಡಲೇ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, 1930 ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡರು.

ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ: ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತುಪಡಿಸಿದ ಸಿಐಡಿ!

Leave a Reply

Your email address will not be published. Required fields are marked *