BBMP
Loading ...

Suryaghra

ಬೆಂಗಳೂರು: ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ (ಪಿಎಂ ಸೂರ್ಯ ಗೃಹ ಉಚಿತ ವಿದ್ಯುತ್) ಯೋಜನೆ ಯಡಿಯಲ್ಲಿ ಮನೆಗಳ ಛಾವಣಿಯ ಮೇಲೆ ಸೌರ ಫಲಕಗಳನ್ನು ಸ್ಥಾಪಿಸಲು ಅಗತ್ಯವಾದ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ. ಯೋಜನೆಯು ಸೌರ ಫಲಕಗಳನ್ನು ಅಳವಡಿಸಲು ಖರ್ಚಾಗುವ ವೆಚ್ಚದ 40% ವರೆಗೆ ಸಬ್ಸಿಡಿಯನ್ನು ಒಳಗೊಂಡಿರುತ್ತದೆ.

ಭಾರತದಲ್ಲಿನ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಈ ಸರ್ಕಾರಿ ಯೋಜನೆ ಹೊಂದಿದ್ದು, ಫೆಬ್ರವರಿ 15, 2024 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. 75,000 ಕೋಟಿಗೂ ಹೆಚ್ಚು ಹೂಡಿಕೆಯ ಈ ಉಪಕ್ರಮವು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುತ್ತದೆ ಎಂದು ಅವರು ಹೇಳಿದರು.

2-ಕಿಲೋವ್ಯಾಟ್ ಸಿಸ್ಟಂಗಳನ್ನು ಸ್ಥಾಪಿಸುವವರಿಗೆ, ಹೊಸ ಸಬ್ಸಿಡಿ 60,000 ರೂ. ಆಗಿರುತ್ತದೆ. 3 ಕಿಲೋವ್ಯಾಟ್ ರೂಫ್‌ಟಾಪ್ ಸೋಲಾರ್ ಸಿಸ್ಟಮ್ ಅಳವಡಿಸುವ ಕುಟುಂಬಗಳಿಗೆ ಹಳೆಯ ಯೋಜನೆಯಡಿ 54,000ರೂ .ಬದಲಿಗೆ 78,000ರೂ. ಸಬ್ಸಿಡಿ ಸಿಗುತ್ತದೆ. ನವೆಂಬರ್ 2023 ರ ಹೊತ್ತಿಗೆ, ಯೋಜನೆಯ ಹಂತ-II ಅಡಿಯಲ್ಲಿ ಸ್ಥಾಪಿಸಲಾದ ಸಾಮರ್ಥ್ಯವು 2,651.10 MW ಆಗಿತ್ತು.

ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ಕ್ರಮ

* ಪಿಎಂ ಸೂರ್ಯ ಘರ್ ಯೋಜನೆಗೆಂದು ಪೋರ್ಟಲ್ ಸಿದ್ಧಪಡಿಸಲಾಗಿದೆ. ಅಲ್ಲಿ ನೊಂದಾಯಿಸಿಕೊಳ್ಳಬೇಕು. ಅದರ ಲಿಂಕ್ ಇಲ್ಲಿದೆ: pmsuryaghar.gov.in
* ಇಲ್ಲಿ ನಿಮ್ಮ ರಾಜ್ಯ, ಡಿಸ್ಕಾಂ ಕಂಪನಿ ಆಯ್ಕೆ ಮಾಡಿ
* ಎಲೆಟ್ರಿಕ್ ಬಿಲ್​ನ ಕನ್ಸೂಮರ್ ನಂಬರ್, ಮೊಬೈಲ್ ನಂಬರ್ ಮತ್ತು ಇಮೇಲ್ ನಮೂದಿಸಿ ನೊಂದಾಯಿಸಿಕೊಳ್ಳಿ.
* ಈಗ ಕನ್ಸೂಮರ್ ನಂಬರ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿರಿ.
* ಲಾಗಿನ್ ಆದ ಬಳಿಕ ರೂಫ್​ಟಾಪ್ ಸೋಲಾರ್ ಅಪ್ಲಿಕೇಶನ್ ಫಾರ್ಮ್ ಅನ್ನು ಭರ್ತಿ ಮಾಡಿ ಸಲ್ಲಿಸಬೇಕು.
* ಇದಕ್ಕೆ ಅನುಮೋದನೆ ಸಿಗುವವರೆಗೂ ಕಾಯಬೇಕು. ಅನುಮೋದನೆ ದೊರೆತ ಬಳಿಕ ನೊಂದಾಯಿತ ಮಾರಾಟಗಾರರು ನಿಮ್ಮ ಮನೆಗೆ ಬಂದು ಸೌರ ಘಟಕವನ್ನು ಸ್ಥಾಪಿಸುತ್ತಾರೆ.

ಇದಾದ ಬಳಿಕ ನೆಟ್ ಮೀಟರ್​ಗೆ ಅರ್ಜಿ ಸಲ್ಲಿಸಬೇಕು. ನೆಟ್ ಮೀಟರ್ ಇನ್ಸ್​ಟಾಲ್ ಆಗಿ ಡಿಸ್ಕಾಂ ಅಧಿಕಾರಿಗಳಿಂದ ಪರಿಶೀಲನೆ ಆದ ಬಳಿಕ ಕಮಿಷನಿಂಗ್ ಸರ್ಟಿಫಿಕೇಟ್ ಸಿಗುತ್ತದೆ.

ಬಳಿಕ ಪಿಎಂ ಸೂರ್ಯಘರ್ ಪೋರ್ಟಲ್​ಗೆ ಹೋಗಿ ಮತ್ತೆ ಲಾಗಿನ್ ಆಗಿ, ನಿಮ್ಮ ಬ್ಯಾಂಕ್ ಖಾತೆ ವಿವರ ನೀಡಿ. ಕ್ಯಾನ್ಸಲ್ ಮಾಡಿದ ಚೆಕ್​ನ ಸ್ಕ್ಯಾನ್ಡ್ ಕಾಪಿಯನ್ನು ಅಪ್​ಲೋಡ್ ಮಾಡಿ. ಇದು ಕೊನೆಯ ಪ್ರಕ್ರಿಯೆ. ಇದು ಮುಗಿದ ಬಳಿಕ 30 ದಿನದೊಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಸಬ್ಸಿಡಿ ಹಣ ಬಂದು ಸೇರುತ್ತದೆ.

ಚೀನಾದಲ್ಲಿ ಮತ್ತೆ ವೈರಸ್‌ ಸ್ಫೋಟ; ಶವಾಗಾರಗಳು ಫುಲ್‌, ಸ್ಮಶಾನದಲ್ಲೂ ಜಾಗವಿಲ್ಲ! ಮೆಡಿಕಲ್‌ ಎಮರ್ಜೆನ್ಸಿ ಘೋಷಣೆ?

Leave a Reply

Your email address will not be published. Required fields are marked *