BBMP
Loading ...

IPL 2025

ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಆರಂಭಕ್ಕೆ ಸಂಬಂಧಿಸಿದಂತೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. 18ನೇ ಆವೃತ್ತಿಯ ಐಪಿಎಲ್ ಯಾವ ದಿನಾಂಕದಿಂದ ಆರಂಭವಾಗಲಿದೆ ಎಂಬುದು ಖಚಿತವಾಗಿದೆ. ಸ್ವತಃ ಈ ವಿಚಾರವನ್ನು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಬಹಿರಂಗ ಪಡಿಸಿದ್ದಾರೆ. ಬಿಸಿಸಿಐನ ವಿಶೇಷ ಸಾಮಾನ್ಯ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜೀವ್ ಶುಕ್ಲಾ ಅವರು ಮಾರ್ಚ್​ 23 ರಿಂದ ಐಪಿಎಲ್ ಆರಂಭವಾಗಲಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಸದ್ಯಕ್ಕೆ ಮೊದಲ ಪಂದ್ಯ ಯಾವೆರಡು ತಂಡಗಳ ನಡುವೆ ನಡೆಯಲಿದೆ ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿಲ್ಲ

ವಾಸ್ತವವಾಗಿ ಇಂದು ಮುಂಬೈನಲ್ಲಿ ಬಿಸಿಸಿಐ, ವಿಶೇಷ ಸಾಮಾನ್ಯ ಸಭೆ ನಡೆಸಿತ್ತು. ಈ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಇದರಲ್ಲಿ ಮುಂಬರುವ ಐಪಿಎಲ್ ಹಾಗೂ ಮಹಿಳಾ ಪ್ರೀಮಿಯರ್ ಲೀಗ್ ಬಗ್ಗೆಯೂ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಾಗಿದೆ. ಆ ಪ್ರಕಾರ, 18ನೇ ಆವೃತ್ತಿಯ ಐಪಿಎಲ್ ಅನ್ನು ಮಾರ್ಚ್​ 23 ರಿಂದ ಆರಂಭಿಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೀವ್ ಶುಕ್ಲಾ, ‘ಈ ಸಭೆಯಲ್ಲಿ ಬಿಸಿಸಿಐನ ನೂತನ ಖಜಾಂಚಿ ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಗಿದೆ. ಇದಲ್ಲದೇ ಒಂದು ವರ್ಷಕ್ಕೆ ಐಪಿಎಲ್ ಆಯುಕ್ತರ ನೇಮಕವನ್ನೂ ಮಾಡಲಾಗಿದೆ. 2025 ರ ಐಪಿಎಲ್ ಮಾರ್ಚ್ 23 ರಿಂದ ಪ್ರಾರಂಭವಾಗಲಿದೆ. ಇದರ ಜೊತೆಗೆ ಮಹಿಳಾ ಪ್ರೀಮಿಯರ್ ಲೀಗ್‌ ಬಗ್ಗೆಯೂ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಈ ಟೂರ್ನಿಯನ್ನು ಆಯೋಜಿಸಲು ಸ್ಥಳಗಳನ್ನು ಸಹ ನಿರ್ಧರಿಸಲಾಗಿದೆ, ಅದನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದಿದ್ದಾರೆ.

ಅನಗತ್ಯ ಗೊಂದಲ ಬೇಡ, ಒಕ್ಕಲಿಗರ ಸಭೆ ಮುಂದೂಡಿ: ಸಂಘದ ಪದಾಧಿಕಾರಿಗಳಿಗೆ ಡಿಸಿಎಂ ಸೂಚನೆ

Leave a Reply

Your email address will not be published. Required fields are marked *