BBMP
Loading ...

Flower show

ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ಸಸ್ಯೋದ್ಯಾನ ಲಾಲ್ ಬಾಗ್ ನಲ್ಲಿ ಪ್ರತೀ ವರ್ಷ ನಡೆಯುವ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.

ಇಂದಿನಿಂದ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕರ ವಾಹನಗಳ ನಿಲುಗಡೆಗೆ ಎಲ್ಲೆಲ್ಲಿ ಅವಕಾಶ?
ಬೆಂಗಳೂರು ಸಂಚಾರ ಪೊಲೀಸರ ಮಾರ್ಗಸೂಚಿ ಪ್ರಕಾರ, ಸಾರ್ವಜನಿಕರ ದ್ವಿಚಕ್ರ ವಾಹನಗಳ ನಿಲುಗಡೆಗೆ ಡಾ.ಮರಿಗೌಡ ರಸ್ತೆ, ಅಲ್ ಅಮೀನ್ ಕಾಲೇಜ್ ಆವರಣದಲ್ಲಿ ಅವಕಾಶ ನೀಡಲಾಗಿದೆ. ಕೆ.ಹೆಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಬಳಿ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ.

ಡಾ.ಮರಿಗೌಡ ರಸ್ತೆ-ಹಾಪ್ ಕಾಮ್ಸ್​​ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ. ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ಕಾರುಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ ಎಂದು ಸಂಚಾರ ಪೊಲೀಸರ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ನೋ ಪಾರ್ಕಿಂಗ್?
ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿ, ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿ, ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದ ವರೆಗೆ ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12 ನೇ ಕ್ರಾಸ್ ವರೆಗೆ, ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್ ನಿಂದ ಪೋಸ್ಟ್ ಆಫೀಸ್ ರಸ್ತೆಯ ಎರಡೂ ಬದಿ ಹಾಗೂ ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ ವಾಹನ ನಿಲುಗಡೆ ನಿಷೇಧ ಹೇರಲಾಗಿದೆ.

ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ, ಆರ್‌.ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ ವರೆಗೆ, ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ ವಾಹನ‌ ನಿಲುಗಡೆ ನಿಷೇಧ ಹೇರಲಾಗಿದೆ.

ಬೆಂಗಳೂರಿನ 2/3ರಷ್ಟು ನಿರ್ಮಾಣ ಹಂತದ ಕಟ್ಟಡಗಳಿಗೆ ಅನುಮತಿಯೇ ಇಲ್ಲ: ಬಿಬಿಎಂಪಿ ಸರ್ವೇ

Leave a Reply

Your email address will not be published. Required fields are marked *